ಕೋಲಾರ :ನೇಣು ಬಿಗಿದುಕೊಂಡು ವರದಿಗಾರರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯಲ್ಲಿ ಈ ಘಟನೆ ಜರುಗಿದೆ. ಶ್ರೀಧರ್ (45) ಆತ್ಮಹತ್ಯೆಗೆ ಶರಣಾದ ವರದಿಗಾರನಾಗಿದ್ದಾರೆ.
ಖಾಸಗಿ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಶ್ರೀಧರ್, ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಡೆತ್ನೋಟ್ನಲ್ಲಿ ತನ್ನ ಜೀವನದಲ್ಲಿ ಎಂದಿಗೂ ಕಪ್ಪು ಚುಕ್ಕೆ ಇರಲಿಲ್ಲ. ನನ್ನ ಜೀವನದಲ್ಲಿ ತಪ್ಪು ಮಾಡಿಲ್ಲವಾದರೂ ನಿನ್ನೆ ಕಪ್ಪು ಚುಕ್ಕೆ ಬಂದಿದೆ ಎಂದು ಬರೆದಿದ್ದಾರೆ.