ಕರ್ನಾಟಕ

karnataka

ETV Bharat / state

ಬೆಳೆಗೆ ಮಾರುಕಟ್ಟೆ ಒದಗಿಸುವಂತೆ ಆಗ್ರಹಿಸಿ ಕೋಲಾರದಲ್ಲಿ ರೈತನ ಪ್ರತಿಭಟನೆ

ರೈತರು ಬೆಳೆದ ಬೆಳೆಗಳಿಗೆ ಸರ್ಕಾರ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಕೋಲಾರದಲ್ಲಿ ರೈತನೋರ್ವ ಪ್ರತಿಭಟನೆ ನಡೆಸಿದ್ದಾನೆ.

ರೈತ ಪ್ರತಿಭಟನೆ
Farmer protest

By

Published : Apr 3, 2020, 1:39 PM IST

ಕೋಲಾರ: ರೈತರು ಬೆಳೆದ ಬೆಳೆಗಳನ್ನು ಸರ್ಕಾರ ಸೂಕ್ತ ರೀತಿಯಲ್ಲಿ ಖರೀದಿಸುವಂತೆ ಆಗ್ರಹಿಸಿ ಕೋಲಾರದಲ್ಲಿ ರೈತ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾನೆ.

ಪ್ರತಿಭಟನೆ ನಡೆಸುತ್ತಿರುವ ರೈತ

ಮುಳಬಾಗಿಲು ಪಟ್ಟಣದ ತೋಟಗಾರಿಕಾ ಇಲಾಖೆಯೆದುರು ಪ್ರತಿಭಟನೆ ನಡೆಸಿದ ರೈತ ಮುಖಂಡ ಗೋಪಾಲ್, ರೈತರು ಬೆಳೆದ ಬೆಳೆಗಳಿಗೆ ಸರ್ಕಾರ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಬೇಕೆಂದು ಬೇಡಿಕೆ ಇಟ್ಟರು.

ಕೊರೊನಾ ಲಾಕ್‌ಡೌನ್‌ನಿಂದಾಗಿ ರೈತರು ಬೆಳೆದ ಸುಮಾರು ಕೋಟ್ಯಂತರ ರೂಪಾಯಿ ಬೆಳೆಯನ್ನು ಬೀದಿಗೆ ಚೆಲ್ಲುವಂತಹ ಪರಿಸ್ಥಿತಿ ಬಂದಿದೆ. ಬೆಳೆ ಖರೀದಿಗೆ ಸರ್ಕಾರ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ರು.

ಜಿಲ್ಲೆಯಲ್ಲಿ ಬೆಳೆದ ಟೊಮೊಟೊ ಸೇರಿದಂತೆ ಇನ್ನಿತರ ಬೆಳೆಗಳು ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಗೆ ರಫ್ತುಗುತ್ತಿವೆ. ಇದೀಗ ರೈತರ ಬದುಕು ಬೀದಿಗೆ ಬಿದ್ದಿರುವ ಹಿನ್ನೆಲೆ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡುವುದರೊಂದಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.

ABOUT THE AUTHOR

...view details