ಕರ್ನಾಟಕ

karnataka

ETV Bharat / state

ಕೋಲಾರದಲ್ಲಿ ಭಾರಿ ಮಳೆ.. ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಾವು - ಸಿಡಿಲು ಬಡಿದು ಮಹಿಳೆ ಮೃತ

ಕೋಲಾರದಲ್ಲಿ ಸಿಡಿದು ಬಡಿದು ಮಹಿಳೆ ಸಾವು. ಕೋಲಾರದಲ್ಲಿ ಮಳೆ ಮುಂದುವರಿದಿದ್ದು, ಸಿಡಿಲು ಬಡಿದು ಓರ್ವ ರೈತ ಮಹಿಳೆ ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಮಹಿಳೆ ಸಾವು
ಸಿಡಿಲು ಬಡಿದು ಮಹಿಳೆ ಸಾವು

By

Published : Sep 1, 2022, 6:42 PM IST

ಕೋಲಾರ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ. ಮುಳಬಾಗಿಲು ತಾಲೂಕಿನ ಮಣಿಘಟ್ಟೆಮಿಟ್ಟೆ ಗ್ರಾಮದಲ್ಲಿ ರವಳಿ (28) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಗುರುವಾರ ಇವರು ತಮ್ಮ ಹೊಲದಲ್ಲಿ ರಾಗಿ ಬಿತ್ತನೆ ಮಾಡಿದ್ದರು. ಆದರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೊಲದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಈ ಹಿನ್ನೆಲೆ ನೀರನ್ನು ಹೊರಹಾಕುವ ಸಲುವಾಗಿ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಗೆ ಸಿಡಿಲು ಬಡಿದಿದೆ. ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಕೋಲಾರ, ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಕೆಲಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನಜೀವನ ಅಸ್ಯವ್ಯಸ್ತವಾಗಿದೆ.

(ಇದನ್ನೂ ಓದಿ: ಕೋಲಾರ: ಬೃಹತ್​ ಮರದ ಕೊಂಬೆ ಬಿದ್ದು ಇಬ್ಬರು ಸಾವು)

ABOUT THE AUTHOR

...view details