ಕೋಲಾರ: ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕಾರ್ಯಕರ್ತ ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತ ನಾಪತ್ತೆ, ದೂರು ದಾಖಲು - 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ
ಕೋಲಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಗೋವಿಂದಪ್ಪ ಎಂಬುವವರು ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ತೆರಳಿ ನಾಪತ್ತೆಯಾಗಿದ್ದಾರೆ.
ಆಗಸ್ಟ್ 15ರಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಾಗವಹಿಸಲು ತೆರಳಿದ್ದ ಗೋವಿಂದಪ್ಪ (47) ನಾಪತ್ತೆಯಾಗಿದ್ದಾರೆ. ಕಾರ್ಯಕ್ರಮಕ್ಕೆ ಹಣದ ಆಮಿಷ ಒಡ್ಡಿ ಕರೆದುಕೊಂಡು ಹೋಗಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಗೋವಿಂದಪ್ಪನ ಬರುವಿಕೆಗೆ ತಾಯಿ, ಹೆಂಡತಿ ಮತ್ತು 3 ಜನ ಹೆಣ್ಣು ಮಕ್ಕಳು ಕಾಯುತ್ತಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಓದಿ:ಎಂ ಬಿ ಪಾಟೀಲ್‌ರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿದ್ರೆ ಕೆಲವರು ಕಾಂಗ್ರೆಸ್ ಸೇರಲಿದ್ದಾರೆ: ಸಚಿವ ಸುಧಾಕರ್