ಕರ್ನಾಟಕ

karnataka

By

Published : Sep 30, 2020, 5:55 PM IST

ETV Bharat / state

ಸಣ್ಣ ನೀರಾವರಿ ಇಲಾಖೆಯ ಎಡವಟ್ಟು ಆರೋಪ: ರೈತರ ಬೆಳೆಗಳಿಗೆ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ

ಮಾಲೂರು ತಾಲೂಕಿನ ಬಾವರಹಳ್ಳಿ ಕೆರೆಗೆ ಕೆ.ಸಿ. ವ್ಯಾಲಿ ನೀರು ಬಂದಿದ್ದು, ಕೆರೆ ತುಂಬಿದ ಪರಿಣಾಮ ಕೆರೆ ಕೋಡಿಯಿಂದ ಕಾಲುವೆ ಇಲ್ಲದೆ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಸರಾಗವಾಗಿ ಹರಿಯುವಂತೆ ಸಣ್ಣ ನೀರಾವರಿ ಇಲಾಖೆಯವರು ಕಾಲುವೆ ಮಾಡಬೇಕಿದ್ದು, ಕಾಲುವೆ ಇಲ್ಲದೆ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ರೈತರ ಬೆಳೆ
ರೈತರ ಬೆಳೆ

ಕೋಲಾರ: ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದಾಗಿ,‌ ರೈತರು ಬೆಳೆದಿರುವ ಬೆಳೆಗಳಿಗೆ ನೀರು ನುಗ್ಗುವ ಮೂಲಕ ಲಕ್ಷಾಂತರ ರೂ. ನಷ್ಟವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮಾಲೂರು ತಾಲೂಕಿನ ಬಾವರಹಳ್ಳಿ ಕೆರೆಗೆ ಕೆ.ಸಿ.ವ್ಯಾಲಿ ನೀರು ಬಂದಿದ್ದು, ಕೆರೆ ತುಂಬಿದ ಪರಿಣಾಮ ಕೆರೆ ಕೋಡಿಯಿಂದ ಕಾಲುವೆ ಇಲ್ಲದೆ ರೈತರ ಜಮೀನುಗಳಿಗೆ ನುಗ್ಗಿದೆ. ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಸರಾಗವಾಗಿ ಹರಿಯುವಂತೆ ಸಣ್ಣ ನೀರಾವರಿ ಇಲಾಖೆಯವರು ಕಾಲುವೆ ಮಾಡಬೇಕಿತ್ತು. ಆದ್ರೆ ಕಾಲುವೆ ಇಲ್ಲದೆ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಜಮೀನುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ

ಇಲಾಖಾಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನೀರು ರೈತರ ಹೊಲಗಳಿಗೆ ನುಗ್ಗುತ್ತಿದೆ. ಇದರಿಂದ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನಾಶವಾಗಿದೆ. ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು ಕ್ರಮಕೈಗೊಳ್ಳದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಸ್ಥಳೀಯ ರೈತರು ಕಿಡಿಕಾರಿದ್ದಾರೆ.

ABOUT THE AUTHOR

...view details