ಕೋಲಾರ : ಮಹಿಳಾ ಅಧಿಕಾರಿಯ ವೈಯಕ್ತಿಕ ವಿಚಾರಗಳ ಕುರಿತು ಆರ್ಟಿಐನಲ್ಲಿ ಮಾಹಿತಿ ಕೇಳಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮುಳಬಾಗಲು ತಾಲ್ಲೂಕಿನ ಮಂಡಿಕಲ್ ನಾಗರಾಜ್ ಎಂಬ ಆರ್ಟಿಐ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯ ಕುರಿತು ಆರ್ಟಿಐ ಕಾರ್ಯಕರ್ತ ನಾಗರಾಜ್ ವೈಯಕ್ತಿಕ ವಿಚಾರಗಳನ್ನು ಕೇಳಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗ್ತಿದೆ. ತಹಶಿಲ್ದಾರ್ ಅವರಿಗೆ ಈವರೆಗೆ ಎಷ್ಟು ಬಾರಿ ಮದುವೆಯಾಗಿದೆ, ಯಾರೊಂದಿಗೆ ಡಿವೋರ್ಸ್ ಆಗಿದೆ, ಸದ್ಯ ಯಾರ ಜೊತೆ ಸಂಸಾರ ಮಾಡುತ್ತಿದ್ದಾರೆ, ಎಲ್ಲಿ ಮದುವೆಯಾಗಿದೆ, ಲಗ್ನ ಪತ್ರಿಕೆ, ಕಲ್ಯಾಣ ಮಂಟಪದ ವಿವರಗಳನ್ನು ನಾಗರಾಜ್ ಕೇಳಿದ್ದಾರೆ ಎಂದು ತಿಳಿದುಬಂದಿದೆ.