ಕರ್ನಾಟಕ

karnataka

ETV Bharat / state

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರ ಬಂಧನ - Arrest of three robbers for stealing a bike

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ‌ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಕಳ್ಳರು ಕೋಲಾರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ಮತ್ತಿತರ ಕಡೆ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರ ಬಂಧನ
ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರ ಬಂಧನ

By

Published : Feb 11, 2021, 5:40 PM IST

ಕೋಲಾರ:ಜಿಲ್ಲೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ನಂಗಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ‌ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಜನ ಬೈಕ್ ಚೋರರನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುನಿರಾಜು, ಕೋಲಾರ ಜಿಲ್ಲೆಯ ಮಾಲೂರಿನ ಅಶ್ವಥ್ ಮತ್ತು ಶ್ರೀನಿವಾಸಪುರ ಮೂಲದ ಮಂಜುನಾಥ್ ಬಂಧಿತ ಆರೋಪಿಗಳು.

ಓದಿ:ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಸಾವು

ಬಂಧಿತರಿಂದ 7 ಲಕ್ಷ ಬೆಲೆಬಾಳುವ 19 ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳರು ಕೋಲಾರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ಮತ್ತಿತರ ಕಡೆ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ABOUT THE AUTHOR

...view details