ಕರ್ನಾಟಕ

karnataka

ETV Bharat / state

ಕೋಲಾರದಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ - ಬಂಗಾರಪೇಟೆ ತಹಶೀಲ್ದಾರ್​ ದಯಾನಂದ್

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಅವರ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಕೋಲಾರದಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ
ಕೋಲಾರದಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ

By

Published : Oct 12, 2022, 3:34 PM IST

Updated : Oct 12, 2022, 4:05 PM IST

ಕೋಲಾರ:ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಅವರ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಘಟನೆ ಘಟ‌ನೆ ಜರುಗಿದ್ದು, ಬಂಗಾರಪೇಟೆ ತಹಶೀಲ್ದಾರ್​ ದಯಾನಂದ್ ಅವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಅವರ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನ

ಇನ್ನು ಸಕ್ಕನಹಳ್ಳಿ ಗ್ರಾಮದ ಸರ್ವೆ ನಂ 29 ನಲ್ಲಿ ರವಿ ಸಿಂಗ್ ಎಂಬುವರು ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ಕಾಂಪೌಂಡ್ ನಿರ್ಮಿಸಿಕೊಂಡಿದ್ದರು. ಈ ಸಂಬಂಧ ತಹಶೀಲ್ದಾರ್ ಅವರಿಗೆ ಸ್ಥಳೀಯರು ದೂರು ನೀಡಿದ್ದ ಹಿನ್ನೆಲೆ ತಹಶೀಲ್ದಾರ್​ ದಯಾನಂದ್ ಅವರು, ಜಿಲ್ಲಾ ಭೂಮಾಪನ ಅಧಿಕಾರಿಗಳಿಂದ ಸರ್ವೆ ನಡೆಸಿ, ಒತ್ತುವರಿದಾರರಿಗೆ ಎರಡು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಇಂದು ಒತ್ತುವರಿ ತೆರವಿಗೆ ಮುಂದಾಗಿದ್ದರು.

ಈ ವೇಳೆ, ಒತ್ತುವರಿ ತೆರವಿಗೆ ಅಡ್ಡಿಪಡಿಸಿದ್ದಲ್ಲದೇ ತಹಶೀಲ್ದಾರ್​ ದಯಾನಂದ್ ಅವರ ಮೇಲೆ ಒತ್ತುವರಿದಾರ ರವಿಸಿಂಗ್ ಕಲ್ಲುಗಳಿಂದ ಹಲ್ಲೆ ನಡೆಸಲು ಮುಂದಾದ ವೇಳೆ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಓದಿ:ರಟ್ಟೀಹಳ್ಳಿಯಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ಹಲ್ಲೆ..

Last Updated : Oct 12, 2022, 4:05 PM IST

ABOUT THE AUTHOR

...view details