ಕೋಲಾರ: ಕರೋನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಅದು ಬರದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಭಿತ್ತಿ ಪತ್ರಗಳ ಮೂಲಕ ಜನರಿಗೆ ಅರಿವು ಮೂಡಿಸುವ ಜೊತೆಗೆ ಸಿಬ್ಬಂದಿಗೆ ತರಬೇತಿ ನೀಡಿ ಹಳ್ಳಿ ಹಳ್ಳಿಗಳಿಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಜನರಿಗೆ ಅರಿವು ಮೂಡಿಸಲು ಯೋಜನೆ ರೂಪಿಸಲಾಗಿದೆ.
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಚೀನೀ ಪ್ರವಾಸಿಗರು.. ಕರೊನಾ ಸೋಂಕು ಸಂಬಂಧ ನಿತ್ಯ ತಪಾಸಣೆ - ಚೈನಾದಿಂದ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ನಿಗಾ
ಕರೋನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಅದು ಬರದಂತೆ ತಡೆಯುವ ನಿಟ್ಟಿನಲ್ಲಿ ಕೋಲಾರದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಚಾರಿಣಿ . ..ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು
ಈಗಾಗಲೇ ಚೀನಾದಿಂದ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ನಿಗಾ ಇರಿಸಿರುವ ಜಿಲ್ಲೆಯ ವೈದ್ಯರ ತಂಡ ಪ್ರತಿನಿತ್ಯ ಅವರನ್ನು ತಪಾಸಣೆ ಮಾಡುತ್ತಿದೆ.
ಅಲ್ಲದೇ ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಪ್ರತ್ಯೇಕ ವಾರ್ಡ್ ಒಂದನ್ನು ತೆರೆದಿದ್ದು, ಶಂಕಿತ ಕರೊನಾ ವೈರಸ್ ಸೋಂಕಿತರು ಬಂದಲ್ಲಿ ಅವರಿಗೆ ಪ್ರತ್ಯೇಕ ಚಿಕಿತ್ಸೆ ನೀಡಲು ಈಗಾಗಲೇ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಯಾದ ಚಾರಿಣಿ ತಿಳಿಸಿದ್ದಾರೆ.