ಕರ್ನಾಟಕ

karnataka

ETV Bharat / state

ಬಂಗಾರಪೇಟೆ: ತಹಶೀಲ್ದಾರ್ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ - Tahashildar murder case

ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಕೊಲೆ ಪ್ರಕರಣವನ್ನ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ ನಾಗರಿಕ ಹಿತರಕ್ಷಣಾ ಸಮಿತಿ, ಪ್ರಗತಿಪರ ಸಂಘಟನೆಗಳು ಸೇರಿದಂತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ಮಾಡಿದರು.

ಬಂಗಾರಪೇಟೆಯಲ್ಲಿ ಪ್ರತಿಭಟನೆ

By

Published : Jul 11, 2020, 5:19 PM IST

ಬಂಗಾರಪೇಟೆ (ಕೋಲಾರ) : ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಎಂಬ ಅಧಿಕಾರಿಯನ್ನ ಜಮೀನು ಸರ್ವೇ ವಿಚಾರವಾಗಿ ನಿವೃತ್ತ ಶಿಕ್ಷಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ‌ ಹಿನ್ನೆಲೆ ಇಂದು ನಾಗರಿಕ ಹಿತರಕ್ಷಣಾ ಸಮಿತಿ, ಪ್ರಗತಿಪರ ಸಂಘಟನೆಗಳು ಸೇರಿದಂತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ಮಾಡಿದರು.

ತಹಶೀಲ್ದಾರ್ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು. ಜೊತೆಗೆ ಕೊಲೆ ಹಿಂದಿನ ಕಾಣದ ಕೈಗಳನ್ನ ಪತ್ತೆ ಹಚ್ಚಬೇಕೆಂದು ಆಗ್ರಹಿಸಿದರು. ಇನ್ನು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸೇರಿದಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಹಶೀಲ್ದಾರ್ ಕೊಲೆ ಪ್ರಕರಣವನ್ನ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಅಲ್ಲದೆ ತಹಶೀಲ್ದಾರ್ ಕೊಲೆಯಲ್ಲಿ ಸರ್ಕಾರದ ಹಾಗೂ ಪೊಲೀಸ್ ಇಲಾಖೆ ವೈಫಲ್ಯವಿದೆ ಎಂದು ಆರೋಪಿಸಿದರು. ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details