ಕೋಲಾರ: ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಿದರು.
ನಿನ್ನೆ(ಗುರುವಾರ) ಬಂಗಾರಪೇಟೆ ತಾಲೂಕಿನ ದೊಡ್ಡಕಳವಂಕಿ ಬಳಿ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದಿದ್ದರು.
ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ಬಂಗಾರಪೇಟೆಯ ದೊಡ್ಡಕಳವಂಕಿ ಗ್ರಾಮದ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬಾತ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದು, ಈ ಸಂಬಂಧ ಸರ್ವೇ ಮಾಡಲು ಹೋದ ವೇಳೆ ಘಟನೆ ನಡೆದಿತ್ತು. ತಕ್ಷಣ ಅವರನ್ನು ಕಾರಿನಲ್ಲಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಜಾಲಪ್ಪ ಅಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದರು.
ಎಡಿಜಿಪಿ ಅಮರ್ ಕುಮಾರ್ ಪಾಂಡೆ ಜೊತೆಗೆ ಐಜಿ ಕುಮಾರ್ ಸಿಂಗ್, ಎಸ್ಪಿ ಮೊಹಮ್ಮದ್ ಸುಜೀತಾ, ಕಾರ್ತಿಕ್ ರೆಡ್ಡಿ ಸಾಥ್ ನೀಡಿದರು.