ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಕೊಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಕೆಜಿಎಫ್ ಪೊಲೀಸರು, ಕೋರ್ಟ್‌ಗೆ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಬಂಗಾರಪೇಟೆ ತಹಶೀಲ್ದಾರ್ ಕೊಲೆ ಪ್ರಕರಣ: ಕೋರ್ಟ್‌ಗೆ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ - ಪೊಲೀಸರೆ ಪ್ರಕರಣದ ಕೇಸ್ ಸ್ಟಡಿ ಮಾಡಿ ನ್ಯಾಯಾಲಯಕ್ಕೆ ವರದಿ
ಬಂಗಾರಪೇಟೆ ತಹಶೀಲ್ದಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್‌ಗೆ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಬಂಗಾರಪೇಟೆ ತಹಶೀಲ್ದಾರ್ ಕೊಲೆ ಪ್ರಕರಣ
ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಮುಂದಾಗಿದ್ದು, ಖುದ್ದು ಪೊಲೀಸರೆ ಪ್ರಕರಣದ ಕೇಸ್ ಸ್ಟಡಿ ಮಾಡಿ ನ್ಯಾಯಾಲಯಕ್ಕೆ ವರದಿ ನೀಡಲಿದ್ದಾರೆ. ಈಗಾಗಲೇ ಡಿವೈಎಸ್‌ಪಿ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಸಿಸಿ ನಂಬರ್ ಕೂಡ ಬಂದಿದೆ.
ಇದೊಂದು ಗಂಭೀರ ಪ್ರಕರಣವಾಗಿದ್ದರಿಂದ ಡಿವೈಎಸ್‌ಪಿ ಪ್ರಕರಣಕ್ಕೆ ಬೇಕಾದ ಎಲ್ಲಾ ಸಾಕ್ಷಿಗಳನ್ನ ನೀಡಿದ್ದಾರೆ. ಇಬ್ಬರು ಎಸ್ಪಿಗಳು ಸೇರಿದಂತೆ ಐಜಿಪಿ ಕಚೇರಿಯ ಲೀಗಲ್ ಒಪಿನಿಯನ್ ಪಡೆದು ಪ್ರಕರಣಕ್ಕೆ ಬೇಕಾದ ಸಂಪೂರ್ಣ ಮಾಹಿತಿ ಕೋರ್ಟ್‌ಗೆ ಸಲ್ಲಿಸಲಾಗುತ್ತದೆ.