ಕೋಲಾರ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನರಸಾಪುರ ಬ್ರಿಡ್ಜ್ ಮೇಲೆ ಜರುಗಿದೆ.
ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಕಾನ್ಸ್ಟೇಬಲ್ ಸಾವು - Kolar KSRP Constable News
ತಾಲೂಕಿನ ನರಸಾಪುರ ಬ್ರಿಡ್ಜ್ ಮೇಲೆ ಘಟನೆ ಜರುಗಿದ್ದು, ಕೆಎಸ್ಆರ್ಪಿಯಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರು ಮೂಲದ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕೆಎಸ್ಆರ್ಪಿ ಕಾನ್ಸ್ಟೇಬಲ್ ಸಾವು
ತಾಲೂಕಿನ ನರಸಾಪುರ ಬ್ರಿಡ್ಜ್ ಮೇಲೆ ಘಟನೆ ಜರುಗಿದ್ದು, ಬೆಂಗಳೂರು ಮೂಲದ ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಬೆಂಗಳೂರು ಮೂಲದ ಮುರುಗೇಶ್ (48) ಮೃತ ವ್ಯಕ್ತಿಯಾಗಿದ್ದು, ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಚಾಲಕನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿದ್ದು, ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಘಟನೆ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.