ಕೋಲಾರ : ಮಹಾಮಾರಿ ಕೊರೊನಾದಿಂದ ದೇಶದ ಆರ್ಥಿಕತೆ ಮೇಲೆ ಉಂಟಾದ ದುಷ್ಪರಿಣಾಮಗಳನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ಎದುರಿಸಿದೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಕೊರೊನಾ ಸಮಯದಲ್ಲಿ ವಿಶೇಷ ಪ್ಯಾಕೇಜ್ ಜಾರಿಗೆ: ಸಂಸದ ಮುನಿಸ್ವಾಮಿ - ಸಂಸದ ಮುನಿಸ್ವಾಮಿ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೊರೊನಾ ಸಂದರ್ಭದಲ್ಲಿ ಎರಡು ಮಾದರಿಯ ವಿಶೇಷ ಪ್ಯಾಕೇಜ್‍ಗಳನ್ನು ಅನುಷ್ಠಾನಗೊಳಿಸಿದೆ..
ಸಂಸದ ಮುನಿಸ್ವಾಮಿ
ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೊರೊನಾ ಸಂದರ್ಭದಲ್ಲಿ ಎರಡು ಮಾದರಿಯ ವಿಶೇಷ ಪ್ಯಾಕೇಜ್‍ಗಳನ್ನು ಅನುಷ್ಠಾನಗೊಳಿಸಿದೆ. ಇದರಿಂದ ದೇಶದ ಆರ್ಥಿಕತೆ ಮೇಲೆ ಉಂಟಾಗುತ್ತಿದ್ದ ದುಷ್ಪರಿಣಾಗಳನ್ನು ತಡೆಗಟ್ಟಿದೆ.
ಕೇಂದ್ರ ಸರ್ಕಾರ ಘೋಷಣೆ ಮಾಡಿದಂತಹ ಗರೀಬ್ ಕಲ್ಯಾಣ್, ಆತ್ಮನಿರ್ಭರ್ ಭಾರತ ಯೋಜನೆಗಳು ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದು ವಿವರಿಸಿದ್ದಾರೆ.