ಕೋಲಾರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನ ಉಳಿಸಬೇಕಾದರೆ ಕಾಂಗ್ರೆಸ್-ಜೆಡಿಎಸ್ ಪಕ್ಷದವರು ಒಟ್ಟಾಗಿ ಕೆಲಸ ಮಾಡಬೇಕೆಂದು ಕೋಲಾರದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಹೇಳಿದರು.
'ಮೈತ್ರಿ ಧರ್ಮ ಪಾಲಿಸದಿದ್ದರೆ ಚುನಾವಣೆ ನಂತರ ರಾಜ್ಯ ಸರ್ಕಾರ ಉಳಿಯೊಲ್ಲ'
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲಬೇಕಾದರೆ ಮೈತ್ರಿ ಧರ್ಮವನ್ನ ಪಾಲಿಸಬೇಕು. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಕಾಂಗ್ರೆಸ್-ಜೆಡಿಎಸ್ ಬದ್ಧವಾಗಿವೆ ಎಂದು ಮಾಲೂರು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.
ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್. ಮುನಿಯಪ್ಪ ಪರ ಪ್ರಚಾರ ಕಾರ್ಯಕ್ರಮಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕಾದರೆ ಮೈತ್ರಿ ಧರ್ಮ ಪಾಲಿಸಬೇಕು. ಇಲ್ಲವಾದಲ್ಲಿ ಬಿಜೆಪಿ ಹೇಳಿದಂತೆ ಲೋಕಸಭಾ ಚುನಾವಣೆ ನಡೆದ ಬಳಿಕ 24 ಗಂಟೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಯುವುದಿಲ್ಲ ಎಂದರು.
ಇನ್ನು ಮುಳಬಾಗಿಲಿನ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಪಕ್ಷೇತರ ಶಾಸಕರಾಗಿದ್ದು, ಏನು ಬೇಕಾದರೂ ಮಾತನಾಡುತ್ತಾರೆ. ಕೊತ್ತೂರು ಸಹ ಕಾಂಗ್ರೆಸ್ ಬೆಂಬಲದಿಂದ ಶಾಸಕರಾದವರು. ಹೀಗಾಗಿ ಅವರಲ್ಲದಿದ್ದರು ಮುಳಬಾಗಿಲು ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡಲಿವೆ. ಇನ್ನು ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಕಾಂಗ್ರೆಸ್-ಜೆಡಿಎಸ್ ಮುಖಂಡರು ಬದ್ಧರಾಗಿದ್ದು, ಮೈತ್ರಿ ಧರ್ಮವನ್ನ ಪಾಲಿಸಬೇಕಿದೆ ಎಂದು ಶಾಸಕ ನಂಜೇಗೌಡ ಎಂದ ತಿಳಿಸಿದರು.