ಕರ್ನಾಟಕ

karnataka

By

Published : Dec 25, 2019, 12:52 PM IST

ETV Bharat / state

ಮಂಗಳೂರು ಗಲಭೆಗೆ ಕಾಂಗ್ರೆಸ್​ ಕಾರಣ: ಸಂಸದ ಎಸ್.ಮುನಿಸ್ವಾಮಿ ಆರೋಪ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ಸಂಭವಿಸಿದ ಗಲಭೆ ಬಗ್ಗೆ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಪ್ರತಿಕ್ರಿಯಿಸಿದ್ದು, ಗಲಭೆ ಹಿಂದೆ ಕಾಂಗ್ರೆಸ್​ ಕೈವಾಡವಿದೆ ಎಂದಿದ್ದಾರೆ.

Mangalore riots are the latest news
ಮಂಗಳೂರು ಗಲಭೆಗೆ ಕಾಂಗ್ರೆಸ್​ ಕಾರಣ

ಕೋಲಾರ:ಪೌರತ್ವ (ತಿದ್ದುಪಡಿ) ಕಾಯ್ದೆ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಯು.ಟಿ.ಖಾದರ್ ಪ್ರಚೋದನಕಾರಿಯಾಗಿ ಮಾತನಾಡುವ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದ್ದಾರೆ.

ಮಂಗಳೂರು ಗಲಭೆಗೆ ಕಾಂಗ್ರೆಸ್​ ಕಾರಣ

ಮಂಗಳೂರು ಗಲಭೆಯ ಸಿಸಿಟಿವಿ ದೃಶ್ಯ ಬಿಡುಗಡೆ ಬಗ್ಗೆ ಮಾತನಾಡಿ, ಪೌರತ್ವ ಕಾಯ್ದೆಯಿಂದಾಗಿ ದೇಶದ ಯಾವುದೇ ಧರ್ಮದವರಿಗೂ ತೊಂದರೆಯಾಗುವುದಿಲ್ಲ. ಕಾಂಗ್ರೆಸ್​ನವರು ವೋಟಿಗಾಗಿ ಯುವಕರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪೌರತ್ವ ಕಾಯ್ದೆಯಿಂದ ನಾವು ಈ ದೇಶದ ಪ್ರಜೆ ಎಂದು ಕಾಂಗ್ರೆಸ್​ನವರಿಗೆ ಅರಿವಾಗಿದೆ. ಹೀಗಾಗಿ ಈ ಹಿಂದೆ ಪ್ರತಿಭಟನೆಗಳು ನಡೆದರೆ ಪಾಕಿಸ್ತಾನದ ಬಾವುಟಗಳು ಹಾರಾಡುತ್ತಿದ್ದವು, ಈಗ ಭಾರತ ಬಾವುಟಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಮಾತನಾಡಿ, ಮಂಗಳೂರಿನಲ್ಲಿ ಕಿಡಿಗೇಡಿಗಳು ಮಾಡಿರುವ ವಿಧ್ವಂಸಕ ಕೃತ್ಯ ಕಾಂಗ್ರೆಸ್​ ಪ್ರೇರಣೆಯಿಂದ ಆಗಿದೆ. ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷಗಳು ಜನರನ್ನು ರೊಚ್ಚಿಗೇಳಿಸುತ್ತಿವೆ. ಮಂಗಳೂರಿನಲ್ಲಿ ಮುಖವಾಡ ಧರಿಸಿ ಗಲಭೆ ನಡೆಸಿದವರ ಕುರಿತು ಎರಡು ಹಂತಗಳಲ್ಲಿ ತನಿಖೆ ಪ್ರಾರಂಭಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದರು.

ABOUT THE AUTHOR

...view details