ಕೋಲಾರ: ಇಲ್ಲಿನ ನಗಸಾಪುರ ಗ್ರಾಮದಲ್ಲಿ ಕೊರೊನಾ ಆತಂಕ ಹೆಚ್ಚಾಗಿರುವ ಹಿನ್ನೆಲೆ ಗ್ರಾಮ ಪಂಚಾಯಿತಿ ವತಿಯಿಂದ ಜಾಗೃತಿ ಮೂಡಿಸಲಾಯಿತು.
ಕೋಲಾರ ಗಡಿ ಭಾಗವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಯಲ ನರಸಾಪುರ ಗ್ರಾಮದ ಇಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕು ತಗುಲಿದ ವ್ಯಕ್ತಿ ಕೋಲಾರದ ನರಸಾಪುರ ಗ್ರಾಮದ ಕುಟುಂಬದೊಂದಿಗೆ ಒಡನಾಟ ಇದ್ದ ಹಿನ್ನೆಲೆ ಸುಮಾರು ಎಂಟು ಮಂದಿಯನ್ನ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಈ ಹಿನ್ನೆಲೆ ನರಸಾಪುರ ಗ್ರಾಮದಲ್ಲಿನ ಜನತೆಗೆ ಕೊರೊನಾ ಆತಂಕ ಹೆಚ್ಚಾಗಿರುವ ಕಾರಣ ಇಂದು ಗ್ರಾಮ ಪಂಚಾಯಿತಿ ವತಿಯಿಂದ ಜಾಗೃತಿ ಮೂಡಿಸಲಾಯಿತು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಪ್ರಚಾರ ಮಾಡಲಾಯಿತು.
ಅಲ್ಲದೆ ಕೊರೊನಾ ಬಗ್ಗೆ ಜನರು ಭಯ ಬೀಳುವ ಅವಶ್ಯಕತೆ ಇಲ್ಲ. ಆದ್ರೆ ಮನೆಗಳ ಬಳಿ ಸ್ವಚ್ಛತೆ ಕಾಪಾಡಿಕೊಳ್ಳುವುದರೊಂದಿಗೆ ಅನಾವಶ್ಯಕವಾಗಿ ಮನೆಯಿಂದ ಹೊರ ಬರಬಾರದೆಂದು ತಿಳಿಹೇಳಿದ್ರು. ಈ ವೇಳೆ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ಸದಸ್ಯರು ಹಾಜರಿದ್ದರು.