ಕೋಲಾರ: ದೇಶಾದ್ಯಂತ ಕೊರೊನಾ ಭೀತಿ ಆವರಿಸಿರುವ ಹಿನ್ನೆಲೆ ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವಂತೆ ಸಿಇಓ ದರ್ಶನ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊರೊನಾ ಭೀತಿ, ತೀವ್ರ ನಿಗಾ ವಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸಿಇಒ ಸೂಚನೆ - ಜನತೆ ಆತಂಕಪಡುವ ಅಗತ್ಯವಿಲ್ಲ
ದೇಶ ಸೇರಿದಂತೆ ರಾಜ್ಯದಾದ್ಯಂತ ಕೊರೊನಾ ಭೀತಿ ಆವರಿಸಿರುವ ಹಿನ್ನಲೆ ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವಂತೆ ಸಿಇಓ ದರ್ಶನ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಕೋಲಾರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಕೊರೊನಾ ಭೀತಿ ಇರುವ ಹಿನ್ನೆಲೆ ಕಳೆದ ಎರಡು ತಿಂಗಳಿನಿಂದ ಜಿಲ್ಲೆಯಾದ್ಯಂತ ತೀವ್ರ ನಿಗಾವಹಿಸಲಾಗಿದೆು. ಅಲ್ಲದೆ ಇದುವರೆಗೂ ಜಿಲ್ಲೆಯಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿಲ್ಲ. ಈ ವಾತಾವರಣಕ್ಕೆ ಕೆಮ್ಮು, ನೆಗಡಿ ಶೀತ ಸಹಜವಾಗಿರುತ್ತದೆ. ಹೀಗಾಗಿ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು. ಆದ್ರೆ ಎದೆಯಲ್ಲಿ ಉಸಿರಾಟದ ತೊಂದರೆ, ಎದೆ ನೋವು ಕಂಡು ಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಇನ್ನು ಕೋಲಾರದಲ್ಲಿ ಕೊರೊನಾ ಬಾಧಿತ ವ್ಯಕ್ತಿಯ ರಕ್ತಮಾದರಿಯನ್ನ ಪರೀಕ್ಷೆ ಮಾಡಬೇಕೆಂದರೆ ಸುಮಾರು 24 ಗಂಟೆಗಳ ಕಾಲಾವಕಾಶಬೇಕು, ಹೀಗಾಗಿ ಜಿಲ್ಲೆಯಾದ್ಯಂತ ಎಲ್ಲಾ ಇಲಾಖೆಯ ಅಧಿಕಾರಿಗಳು ತೀವ್ರ ನಿಗಾವಹಿಸಬೇಕೆಂದು ಆದೇಶಿಸಿದರು.