ಕೋಲಾರ :ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗಿದೆ. ವೆಂಟಿಲೇಟರ್ ಹಾಗೂ ಆಕ್ಸಿಜನ್ ಇಲ್ಲದೆ ಸೋಂಕಿತರು ಪ್ರಾಣ ಬಿಡುತ್ತಿದ್ದಾರೆ. ಇಂದು ಕೂಡ ಕೋವಿಡ್ ಆಸ್ಪತ್ರೆಯಲ್ಲಿ ಲಕ್ಷ್ಮಿದೇವಮ್ಮ, ಮುನಿಯಮ್ಮ ಎಂಬುವರು ಸಾವನ್ನಪ್ಪಿದ್ದಾರೆ. ಈವರೆಗೂ ಐದು ಜನರು ವೆಂಟಿಲೇಟರ್ ವ್ಯವಸ್ಥೆ ಇಲ್ಲದೆ ಮೃತಪಟ್ಟಿದ್ದಾರೆ.
ಕೋಲಾರ : ವೆಂಟಿಲೇಟರ್ ಹಾಗೂ ಆಕ್ಸಿಜನ್ ಇಲ್ಲದೆ ಸೋಂಕಿತರು ಸಾವು! - ಆರೋಗ್ಯ ಇಲಾಖೆ
3 ಸಾವಿರ ಬೆಡ್ , 65 ವೆಂಟಿಲೇಟರ್, ಆಕ್ಸಿಜನ್ ಇದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರೂ, ಆರೋಗ್ಯ ಇಲಾಖೆಯವರು.. ವೆಂಟಿಲೇಟರ್ ನೀಡುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
![ಕೋಲಾರ : ವೆಂಟಿಲೇಟರ್ ಹಾಗೂ ಆಕ್ಸಿಜನ್ ಇಲ್ಲದೆ ಸೋಂಕಿತರು ಸಾವು! corona-patients-died-without-ventilator-and-oxygen](https://etvbharatimages.akamaized.net/etvbharat/prod-images/768-512-11510103-thumbnail-3x2-med.jpg)
corona-patients-died-without-ventilator-and-oxygen
ಸಾವಿನ ಓಟಕ್ಕೆ ಕೋಲಾರದ ಜನ ಬೆಚ್ಚಿ ಬಿದ್ದಿದ್ದಾರೆ. 3 ಸಾವಿರ ಬೆಡ್, 65 ವೆಂಟಿಲೇಟರ್, ಆಕ್ಸಿಜನ್ ಇದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರೂ, ವೆಂಟಿಲೇಟರ್ ನೀಡದೆ ಆರೋಗ್ಯ ಇಲಾಖೆಯವರು ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ವೆಂಟಿಲೆಟರ್ ಇದ್ದರೂ ನೀಡುತ್ತಿಲ್ಲ ಎಂದು ಗಂಭೀರ ಆರೋಪ
ಕೋಲಾರ ಜಿಲ್ಲೆಯಲ್ಲಿ ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಿಂದ ರೋಗಿಗಳು ಪರದಾಡುವಂತಾಗಿದೆ. ವೆಂಟಿಲೇಟರ್ ಇಲ್ಲದೆ ನಿನ್ನೆಯಿಂದ ಜಿಲ್ಲೆಯಲ್ಲಿ 5ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಆಸ್ಪತ್ರೆಗಳು ಹಾಗೂ ವೈದ್ಯರ ವಿರುದ್ದ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated : Apr 23, 2021, 3:58 PM IST