ಕೋಲಾರ:ಜಿಲ್ಲೆಯ ಮಾಲೂರು ತಾಲೂಕಿನ ಸಂಪಂಗೆರೆ ಗ್ರಾಮದ ಬಳಿ ಇಲ್ಲಿರುವ ಅರ್ಥ ಪ್ರಾಪರ್ಟೀಸ್ನ ಬಡಾವಣೆಯಲ್ಲಿ ವಾಸವಿರುವ ಒಂದೇ ಕುಟುಂಬದ ನಾಲ್ವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
58 ವರ್ಷದ ವ್ಯಕ್ತಿ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋದಾಗ ಅಲ್ಲಿ ಉಸಿರಾಟದ ತೊಂದರೆ ಇದ್ದ ಕಾರಣ ಅವರ ಗಂಟಲು ದ್ರವದ ಮಾದರಿಯನ್ನು ಪಡೆದು ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗಿತ್ತು. ಈ ವೇಳೆ ಆತನಲ್ಲಿ ಸೋಂಕು ಇರುವುದು ದೃಢವಾಗಿತ್ತು. ಪರಿಣಾಮ ಅವರನ್ನು ಕೋಲಾರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.