ಕರ್ನಾಟಕ

karnataka

ETV Bharat / state

ಕೋಲಾರ: ಪ್ರೀತಿ ನಿರಾಕರಿಸಿದ್ದಕ್ಕೆ ಕಾಲೇಜು ಕ್ಯಾಂಪಸ್​ನಲ್ಲೇ ವಿದ್ಯಾರ್ಥಿನಿಗೆ ಬ್ಲೇಡ್​ನಿಂದ ಇರಿದ ಪಾಗಲ್ ಪ್ರೇಮಿ - etv bharat kannada

ಪ್ರೀತಿ ಮಾಡಲು ನಿರಾಕರಿಸಿದ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯೊಬ್ಬ ಬ್ಲೇಡ್​ನಿಂದ ಹಲ್ಲೆ ಮಾಡಿರುವ ಘಟನೆ ಕೋಲಾರದ ಕೆಜಿಎಫ್​ನಲ್ಲಿ ನಡೆದಿದೆ.

crime-young-man-stabs-a-girl-with-a-blade-for-refusing-love-in-kolar
ಕೋಲಾರ: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಗೆ ಬ್ಲೇಡ್​ನಿಂದ ಇರಿದ ಪಾಗಲ್ ಪ್ರೇಮಿ

By ETV Bharat Karnataka Team

Published : Sep 20, 2023, 9:23 PM IST

ಕೋಲಾರ: ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್​ನ ಚಾಂಪಿಯನ್ ರೀಫ್ ನಗರದಲ್ಲಿರುವ ಖಾಸಗಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದಿದೆ.

ದ್ವಿತೀಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ಪ್ರೀತಮ್ ಪ್ರಭು ಎಂಬ ಯುವಕ, ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದರಂತೆ ಇಂದು ಸಹ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ ಒತ್ತಾಯಿಸಿದ್ದ. ಆದರೆ ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಯುವಕ ವಿದ್ಯಾರ್ಥಿನಿಯ ಕುತ್ತಿಗೆಗೆ ಬ್ಲೇಡ್ ನಿಂದ ಇರಿದಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂಬ ಮಾಹಿತಿ ಸಿಕ್ಕಿದೆ. ಹಲ್ಲೆಗೊಳಗಾಗಿರುವ ವಿದ್ಯಾರ್ಥಿನಿ ಮೂಲತಃ ಬೆಂಗಳೂರಿನವಳಾಗಿದ್ದು, ವಿದ್ಯಾಭ್ಯಾಕ್ಕಾಗಿ ಕೆಜಿಎಫ್​ನಲ್ಲಿರುವ ತನ್ನ ಚಿಕ್ಕಪ್ಪನ ಮನೆಯಲ್ಲಿ ನೆಲೆಸಿದ್ದಳು. ಘಟನಾ ಸ್ಥಳಕ್ಕೆ ಉರಿಗಾಂ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಚಿಕ್ಕೋಡಿ: ಕೂದಲು ಆರಿಸುವ ವಿಚಾರಕ್ಕೆ ಗಲಾಟೆ.. ಬಾಲಕನ ಕೊಂದು ಬಾವಿಗೆಸೆದ ಕಿರಾತಕರು

ಯುವತಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆ:ಇತ್ತೀಚಿಗೆ,ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನಿಂದ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಕೇರಳದ ಪೆರುಂಬವೂರ್​ನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ರಾಯಮಂಗಲ ಮೂಲದ ಯುವತಿ ಮೃತಪಟ್ಟಿದ್ದಳು. ಕಳೆದ ಎಂಟು ದಿನಗಳ ಹಿಂದೆ ಯುವತಿ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಯುವಕ ಚಾಕುವಿನಿಂದ ಇರಿದಿದ್ದ. ಪೆರುಂಬವೂರ್‌ನ ರಾಜಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು.

ಎಲ್ಡೋಸ್ ಅಲಿಯಾಸ್ ತುಳಸಿ ಎಂಬಾತ ಯುವತಿ ಮನೆಗೆ ನುಗ್ಗಿ, ಯುವತಿ ಸೇರಿದಂತೆ ಅವಳ ಅಜ್ಜ, ಅಜ್ಜಿಯ ಮೇಲೂ ಹಲ್ಲೆ ಮಾಡಿದ್ದ. ಬಳಿಕ ಅಲ್ಲಿಂದ ಪರಾರಿಯಾಗಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಯುವತಿಗೆ ತುಳಸಿ ಎಂಬ ಯುವಕ ಪ್ರಪೋಸ್ ಮಾಡಿದ್ದ. ಆದರೆ ಅದನ್ನು ಯುವತಿ ನಿರಾಕರಿಸಿದ್ದಳು. ದಿನವೂ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ. ತುಳಸಿ ಕಿರುಕುಳದಿಂದ ಮೊಬೈಲ್ ನಂಬರ್ ಕೂಡ ಯುವತಿ ಬದಲಾಯಿಸಿದ್ದಳು. ಇದರಿಂದ ಕೋಪಗೊಂಡ ಆರೋಪಿಯು ಯುವತಿಯನ್ನು ಕೊಲ್ಲುವ ಉದ್ದೇಶದಿಂದ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ್ದ. ಯುವತಿಯನ್ನು ಕಾಪಾಡಲು ಬಂದ ಓಸೆಪ್ ಮತ್ತು ಪತ್ನಿ ಚಿನ್ನಮ್ಮ ಎನ್ನುವವರ ಮೇಲೂ ಹಲ್ಲೆ ನಡೆಸಿದ್ದ. ಬಳಿಕ ಅಲ್ಲಿಂದ ಪರಾರಿಯಾಗಿದ್ದ ಆರೋಪಿ ಯುವಕ ತನ್ನ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದರು.

ABOUT THE AUTHOR

...view details