ಕೋಲಾರ:ಕಾಮಗಾರಿ ವೇಳೆ ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯುತ್ ಶಾಕ್: ಕೋಲಾರದಲ್ಲಿ ಇಬ್ಬರು ಕಾರ್ಮಿಕರು ಸಾವು, ಓರ್ವನ ಸ್ಥಿತಿ ಚಿಂತಾಜನಕ - ವಿದ್ಯುತ್ ಶಾಕ್
ಕಾಮಗಾರಿ ವೇಳೆ ವಿದ್ಯುತ್ ತಗುಲಿ ಕೋಲಾರದಲ್ಲಿ ಇಬ್ಬರು ಕಾರ್ಮಿಕರು ಸಾವು, ಓರ್ವನ ಸ್ಥಿತಿ ಗಂಭೀರ. ಆಂಧ್ರ ಮೂಲದ ಕಾರ್ಮಿಕರು ಸ್ಥಳದಲ್ಲೇ ಸಾವು. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು.
ವಿದ್ಯುತ್ ತಗಲಿ ಇಬ್ಬರು ಕಾರ್ಮಿಕರು ಸಾವು
ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗ್ರಾಮದ ಬಳಿ ಘಟನೆ ಜರುಗಿದ್ದು, ವಿದ್ಯುತ್ ಕಾಮಗಾರಿ ವೇಳೆ ವಿದ್ಯುತ್ ಶಾಕ್ ಹೊಡೆದು ಆಂಧ್ರ ಮೂಲದ ರಾಜಬಾಬು (35) ಹಾಗೂ ಚಿನ್ನಿಬಾಬು (28) ಎಂಬ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೆ ಅವರನ್ನ ರಕ್ಷಿಸಲು ಹೋದ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ಇನ್ನು ಗಾಯಾಳುವನ್ನ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.