ಕೋಲಾರ:ಜಿಲ್ಲಾಸ್ಪತ್ರೆಯಲ್ಲಿರುವ ವೆಂಟಿಲೇಟರ್, ಆಕ್ಸಿಜನ್ ವ್ಯತ್ಯಯ ಸೇರಿ ಇತರೆ ಲೋಪದೋಷಗಳನ್ನು ಕೂಡಲೇ ಸರಿಪಡಿಸಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಡಿಸಿಎಂ ಅಶ್ವತ್ಥನಾರಾಯಣ ಹೇಳಿಕೆ ಸದ್ಯ ಜಿಲ್ಲಾಸ್ಪತ್ರೆಯಲ್ಲಿ 60 ಆಕ್ಸಿಜನ್ ಪಾಯಿಂಟ್ ಮಾತ್ರ ಇದ್ದು, ಇದನ್ನು ಏರಿಕೆ ಮಾಡಲಾಗುವುದು. 20 ವೆಂಟಿಲೇಟರ್‌ಗಳ ಪೈಕಿ ಒಂದು ಬಳಕೆಯಾಗುತ್ತಿದ್ದು, ಎಲ್ಲವನ್ನು ಬಳಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು, 200 ಬೆಡ್‌ನಿಂದ 400 ಬೆಡ್ ಏರಿಕೆ ಮಾಡಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಕೊರೊನಾ ಚಿಕಿತ್ಸೆ ಪಡೆದವರ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣಕ್ಕೆ ವೈದ್ಯಾಧಿಕಾರಿಯನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಕೋವಿಡ್ ಸೋಂಕಿತರಾಗಿ ಮನೆಗಳಲ್ಲಿ ಮತ್ತು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರವವರ ಮಾಹಿತಿಯನ್ನು ಸರಿಯಾಗಿ ಸಂಗ್ರಹ ಮಾಡಬೇಕೆಂದು ಸೂಚಿಸಿದರು.
ಹೀಗೆ ಸಂಗ್ರಹಿಸಿದ ಮಾಹಿತಿಯನ್ನು ಕೋವಿಡ್ ವಾರ್ ರೂಂಗೆ ಅಪ್‌ಡೇಟ್ ಮಾಡಬೇಕು. ಹೋಮ್ ಐಸೋಲೇಷನ್ ಆದವರು ಮಾತ್ರವಲ್ಲ, ಉಳಿದೆಲ್ಲ ಸೋಂಕಿತರಿಗೆ ಇರುವ ಸೌಲಭ್ಯ ಮತ್ತಿತರೆ ಎಲ್ಲ ಅಂಶಗಳ ಬಗ್ಗೆಯೂ ಕಾಲ್ ಸೆಂಟರ್‌ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.