ಕೋಲಾರ : ಮಾಜಿ ಶಾಸಕ ವರ್ತೂರ್ ಪ್ರಕಾಶ್ ಕರೆದಿದ್ದ ಬೆಂಬಲಿಗರ ಸಭೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿದ್ದು, ತಳ್ಳಾಟ ನೂಕಾಟದ ಘಟನೆ ನಡೆಯಿತು.
ಕಾಂಗ್ರೆಸ್ ಗೆ ಮಾತ್ರ ನಾವ್ ಸಪೋರ್ಟ್ ಮಾಡಲ್ಲ... ಸಭೆಯಲ್ಲಿ ವರ್ತೂರು ಬೆಂಬಲಿಗರ ಆಕ್ರೋಶ - kannada news
ವರ್ತೂರ್ ಪ್ರಕಾಶ್ ಬೆಂಬಲಿಗರ ಸಭೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುವುದು ಬೇಡ ಎಂದು ಮುಖಂಡನ ವಿರುದ್ದವೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು.
ಕೋಲಾರ ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಬಲಿಗರ ಸಭೆಯಲ್ಲಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂದು ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡುವ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆದಿದ್ದು, ಪರಸ್ಪರ ವಾಗ್ವಾದ ನಡೆಯಿತು.
ಇನ್ನು ಸಭೆಯಲ್ಲಿ ಅಲ್ಪ ಸಂಖ್ಯಾತರ ಮುಖಂಡ ಸಾಬೀರ್ ಪಾಷಾ, ಈ ಬಾರಿ ಕೆ.ಎಚ್.ಮುನಿಯಪ್ಪ ಅವರನ್ನೊಳಗೊಂಡ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದಾಗ, ಕೆಲ ಕಾರ್ಯಕರ್ತರು ಕಾಂಗ್ರೆಸ್ ಗೆ ಬೆಂಬಲ ನೀಡುವುದು ಬೇಡ ಎಂದು ಮುಖಂಡನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಕೆಲಕಾಲ ಸಭೆಯಲ್ಲಿ ಗದ್ದಲ ಉಂಟಾಗಿ ತಳ್ಳಾಟ ನೂಕಾಟ ನಡೆದಿದ್ದು, ವರ್ತೂರ್ ಪ್ರಕಾಶ್ ಕಾರ್ಯಕರ್ತರನ್ನ ಸಮಾಧಾನಪಡಿಸಿ ಪರಿಸ್ಥತಿ ತಿಳಿಗೊಳಿಸಿದರು.