ಕರ್ನಾಟಕ

karnataka

ETV Bharat / state

ಮಹಾಸಮರದ ಮತ ಎಣಿಕೆ:ಕೋಲಾರ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ - ಲೋಕಸಭಾ ಚುನಾವಣೆ

17 ರಿಂದ 23 ಸುತ್ತುಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಪ್ರತಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬ ವೀಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರತಿ ಟೇಬಲ್​​ಗೆ ಒಬ್ಬ ಏಜೆಂಟರು ಬರಬಹುದಾಗಿದ್ದು, ಒಟ್ಟು 600 ಏಜೆಂಟರಿಗೆ ಪಾಸ್​ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣಾಧಿಕಾರಿ ಜೆ.ಮಂಜುನಾಥ್

By

Published : May 21, 2019, 11:26 PM IST

ಕೋಲಾರ:ಮೇ 23 ರಂದು ನಡೆಯುವ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಚುನಾವಣಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ನಗರದ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಭದ್ರತೆ ಕೊಠಡಿ ಮತ್ತು ಎಣಿಕೆ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರ ಲೋಕಸಭಾ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, 2100 ಮತಗಟ್ಟೆಗಳಿವೆ. 8 ವಿಧಾನಸಭಾ ಕ್ಷೇತ್ರಗಳಿಗೆ 108 ಟೇಬಲ್​ಗಳನ್ನು ಹಾಕಲಾಗಿದ್ದು, ಪ್ರತಿ ಟೇಬಲ್​ಗೆ 3 ಜನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಒಟ್ಟು 700 ಮಂದಿ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಚುನಾವಣಾಧಿಕಾರಿ ಜೆ.ಮಂಜುನಾಥ್

ಮತ ಎಣಿಕೆ ಪ್ರಕ್ರಿಯೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಇದಕ್ಕೂ ಮೊದಲು ಬೆಳಗ್ಗೆ 7 ಗಂಟೆಗೆ ಭದ್ರತಾ ಕೊಠಡಿಗಳನ್ನು ವೀಕ್ಷಕರ ಸಮ್ಮುಖದಲ್ಲಿ ತೆರೆಯಲಿದ್ದು, ಮೊದಲಿಗೆ ಅಂಚೆ ಮತಗಳನ್ನು ಎಣಿಕೆ ಮಾಡಿ ನಂತರ ವಿದ್ಯುನ್ಮಾನ ಯಂತ್ರಗಳ ಎಣಿಕೆ ನಡೆಯಲಿದೆ ಎಂದರು.

17 ರಿಂದ 23 ಸುತ್ತುಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಪ್ರತಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬ ವೀಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರತಿ ಟೇಬಲ್​​ಗೆ ಒಬ್ಬ ಏಜೆಂಟರು ಬರಬಹುದಾಗಿದ್ದು, ಒಟ್ಟು 600 ಏಜೆಂಟರಿಗೆ ಪಾಸ್​ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಗಲಾಟೆ, ಗೊಂದಲಗಳು ಆಗದಂತೆ ಮುಂಜಾಗ್ರತಾ ಕ್ರಮವಾಗಿ ಕೆಎಸ್ಆರ್​ಪಿಎಫ್, ಸಿಆರ್​ಪಿಎಫ್ ತುಕಡಿಗಳು ಸೇರಿದಂತೆ ಒಟ್ಟು 1000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇನ್ನು ವಿಜಯೋತ್ಸವಕ್ಕೆ ಅವಕಾಶವಿಲ್ಲ. ಗೆದ್ದ ಅಭ್ಯರ್ಥಿಗಳು ಯಾವುದೇ ವಿಜಯೋತ್ಸವವನ್ನು ಆಚರಿಸದೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕಾಗಿದೆ ಎಂದರು.

ABOUT THE AUTHOR

...view details