ಕರ್ನಾಟಕ

karnataka

ಕೋಲಾರ: ಕಾಡಾನೆಗಳ ದಾಳಿಗೆ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಬಲಿ

By

Published : Mar 2, 2020, 5:53 PM IST

Updated : Mar 3, 2020, 3:17 AM IST

ಕೋಲಾರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಗೆ ಇಬ್ಬರು ಬಲಿಯಾಗಿದ್ದಾರೆ. ಕಾಡಾನೆಗಳಿಂದ ದಾಳಿಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

KN_KLR_4_DIFFERENT_PROTEST_AVB_7205620
ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಆನೆಗಳ ದಾಳಿ, ಇಬ್ಬರಿಗೆ ಗಾಯ

ಕೋಲಾರ: ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಾಡಾನೆಗಳ ಹಿಂಡೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಲೂರು ತಾಲೂಕಿನ ನೂಟವೆ ಗ್ರಾಮದ ಬಳಿ ನಡೆದಿದೆ.

ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬಲಿ ಪಡೆದ ಕಾಡಾನೆಗಳು

ಅರಣ್ಯ ಇಲಾಖೆ ಸಿಬ್ಬಂದಿ ಗುಟ್ಟಮುನಿಯಪ್ಪ ಹಾಗೂ ಕೊಮ್ಮನಹಳ್ಳಿ ಗ್ರಾಮದ ನಿವಾಸಿ ಆನಂದ್ ಎಂಬುವರ ಮೇಲೆ ಕಾಡಾನೆಗಳು ದಾಳಿ ಮಾಡಿದ್ದವು. ಇಬ್ಬರನ್ನೂ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಇನ್ನು ಕಳೆದ ಒಂದು ತಿಂಗಳಿನಿಂದ ಕೋಲಾರದ ಗಡಿ ಭಾಗಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳನ್ನ ನಾಶ ಮಾಡುತ್ತಿವೆ. ಆನೆಗಳನ್ನು ಹಿಮ್ಮೆಟ್ಟಿಸಲು ಸತತ ಒಂದು ತಿಂಗಳಿನಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಅದರಂತೆ ಇಂದೂ ಕೂಡ ಆನೆಗಳನ್ನು ಹಿಮ್ಮೆಟ್ಟಿಸುವ ವೇಳೆ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಈ ದುರಂತ ಸಂಭವಿಸಿದೆ.

Last Updated : Mar 3, 2020, 3:17 AM IST

ABOUT THE AUTHOR

...view details