ಕೋಲಾರ: ಆ ಅರಣ್ಯ ಪ್ರದೇಶದಲ್ಲಿ ವರ್ಷದಿಂದ ವರ್ಷಕ್ಕೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಇದೀಗ ಆಹಾರ, ನೀರನ್ನ ಅರಿಸಿ ಕಾಡಿನಿಂದ ಗಜಪಡೆ ನಾಡಿನತ್ತ ಹೆಜ್ಜೆ ಹಾಕುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಜೊತೆಗೆ ರೈತರು ಬೆಳೆದ ಲಕ್ಷಾಂತರ ರೂಪಾಯಿ ಬೆಳಗಳನ್ನ ಹಾಳು ಮಾಡಿವೆ.
ಹೌದು, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಂಧ್ರ ಗಡಿಯಲ್ಲಿನ ಬೂದಿಕೋಟೆ ಗ್ರಾಮಗಳ ಸುತ್ತಮುತ್ತ ಸುಮಾರು ಹನ್ನೆರಡು ಆನೆಗಳ ಹಿಂಡು ಬೀಡು ಬಿಟ್ಟಿವೆ. ರಾಮಕುಪ್ಪಂ ಹಾಗೂ ಕೃಷ್ಣಗಿರಿ ಅರಣ್ಯ ಪ್ರದೇಶದಿಂದ ಬಂದಿರುವ ಈ ಆನೆಗಳ ಹಿಂಡು ಕರ್ನಾಟಕದ ಗಡಿ ಭಾಗದ ಜನರ ನಿದ್ದೆಗಡೆಸಿವೆ. ಜೊತೆಗೆ ಕಳೆದ 15 ದಿನಗಳಿಂದ ಜಿಲ್ಲೆಯ ಗಡಿಯಲ್ಲಿ ಬೀಡು ಬಿಟ್ಟಿರುವ ಆನೆ ಹಿಂಡು ನೂರಾರು ಎಕರೆಯಲ್ಲಿ ಬೆಳೆಯಲಾಗಿದ್ದ ವಿವಿಧ ಬೆಳೆಗಳನ್ನ ನಾಶ ಮಾಡಿವೆ. ಟೊಮ್ಯಾಟೊ, ಪಪ್ಪಾಯ, ಬೀನ್ಸ್, ಭತ್ತ ಸೇರಿದಂತೆ ರೈತರ ಮೋಟಾರ್ ಪಂಪು, ಗುಡಿಸಲನ್ನ ಧ್ವಂಸ ಮಾಡಿದ್ದು, ರೈತರು ಕಂಗಾಲಾಗಿದ್ದಾರೆ.