ಕರ್ನಾಟಕ

karnataka

ETV Bharat / state

ಕೋಲಾರ: ಬಿಗಿ ಪೊಲೀಸ್ ಬಂದೋಬಸ್ತ್​ನೊಂದಿಗೆ ಗೌಡನ ಕೆರೆಯ ಒತ್ತುವರಿ ತೆರವು - ಬಂಗಾರಪೇಟೆ ತಹಶೀಲ್ದಾರ್ ರಮೇಶ್

ಬಿಗಿ ಪೊಲೀಸ್ ಬಂದೋಬಸ್ತ್​ನೊಂದಿಗೆ ಇಂದು ಬಂಗಾರಪೇಟೆ ತಾಲೂಕಿನ ದೊಡ್ಡ ಕೆರೆ ಎಂದೇ ಹೆಸರುವಾಸಿಯಾಗಿರುವ ಗೌಡನ ಕೆರೆಯ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು.

Emphasis clearance Of Gowdana lake
ಬಿಗಿ ಪೊಲೀಸ್ ಬಂದೋಬಸ್ತ್​ನೊಂದಿಗೆ ಗೌಡನ ಕೆರೆಯ ಒತ್ತುವರಿ ತೆರವು

By

Published : Sep 16, 2020, 6:40 PM IST

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡ ಕೆರೆ ಎಂದೇ ಹೆಸರುವಾಸಿಯಾಗಿರುವ ಗೌಡನ ಕೆರೆಯ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು.

ಬಿಗಿ ಪೊಲೀಸ್ ಬಂದೋಬಸ್ತ್​ನೊಂದಿಗೆ ಗೌಡನ ಕೆರೆಯ ಒತ್ತುವರಿ ತೆರವು

ಬಂಗಾರಪೇಟೆ ತಹಶೀಲ್ದಾರ್ ರಮೇಶ್, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ಸರ್ವೇ ಅಧಿಕಾರಿಗಳ‌ ಹಾಗೂ ಪೊಲೀಸರ ಸಮ್ಮುಖದಲ್ಲಿ ಗೌಡನ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು. ಮೊದಲಿಗೆ ಕೆರೆಯ ಬೌಂಡರಿ ಲೈ‌ನ್ ಗುರುತಿಸಿ, ಜೆಸಿಬಿಗಳ‌ ಮುಖಾಂತರ ಒತ್ತುವರಿ ತೆರವು ಮಾಡಲಾಯಿತು. ಇನ್ನು, ಕೆರೆಯಂಗಳದಲ್ಲಿ ಮನೆಗಳ‌ನ್ನು ನಿರ್ಮಾಣ ಮಾಡಿಕೊಂಡಿರುವ ಹಿನ್ನೆಲೆ, ಮಾಲೀಕರಿಗೆ ನೋಟಿಸ್ ನೀಡಿ, ನಿಯಮಾನುಸಾರ ತೆರವು ಮಾಡಲಿದ್ದಾರೆ.

ಇತ್ತೀಚೆಗಷ್ಟೆ ಕೆರೆ ಸರ್ವೇ ಕಾರ್ಯಕ್ಕೆ ತೆರಳಿದ್ದ ತಹಶೀಲ್ದಾರ್ ಒಬ್ಬರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಹಿನ್ನಲೆ, ಇಂದು ಬಿಗಿ ಪೊಲೀಸ್ ಬಂದೋಬಸ್ತ್​ನೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು.

ABOUT THE AUTHOR

...view details