ಕೋಲಾರ: ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ತಮ್ಮೂರಾದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ನಲ್ಲಿದ್ದು ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕುತೂಹಲದ ದೃಷ್ಟಿನೆಟ್ಟಿದ್ದಾರೆ.
ಸುಪ್ರೀಂ ತೀರ್ಪಿನ ಬಗ್ಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕುತೂಹಲದ ಕಣ್ಣು - ಅನರ್ಹ ಶಾಸಕರ ಕ್ಷೇತ್ರಗಳು
ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದ ಮಾಜಿ ವಿಧಾಸಭಾಧ್ಯಕ್ಷ ರಮೇಶ್ ಕುಮಾರ್ ಇಂದಿನ ಸುಪ್ರೀಂಕೋರ್ಟ್ ತೀರ್ಪು ಯಾವ ರೀತಿ ಬರಲಿದೆಯೋ ಎಂದು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.
ಸುಪ್ರೀಂ ತೀರ್ಪಿನ ಬಗ್ಗೆ ಕಾಯುತ್ತಿರುವ ಮಾಜಿ ಸ್ಪೀಕರ್
ತಮ್ಮ ನಿವಾಸದಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಜನರೊಂದಿಗೆ ಅವರು ಮಾತುಕತೆ ನಡೆಸುತ್ತಿದ್ದಾರೆ. ತೀರ್ಪು ಬಂದ ಬಳಿಕ ಮಾಧ್ಯಮಗಳ ಮೂಲಕ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.