ಕೋಲಾರ: ಬಿಎಸ್ಎನ್ಎಲ್ ಕಂಪನಿಯ ನೆಟ್ವರ್ಕ್ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ನಗರದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಬಿಎಸ್ಎನ್ಎಲ್ ಅವ್ಯವಸ್ಥೆ ವಿರುದ್ಧ ರೈತರ ಪ್ರತಿಭಟನೆ ನಗರದ ಬಿಎಸ್ಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಬಿಎಸ್ಎನ್ಎಲ್ ನೆಟ್ವರ್ಕ್ಅನ್ನ ಕೇಂದ್ರ ಸರ್ಕಾರ ಖಾಸಗೀಕರಣ ಮಾಡುವ ಮೂಲಕ ಅಂಬಾನಿ ಒಡೆತನದ ಜಿಯೋ ಕಂಪನಿಯವರೆಗೆ ಮಣೆ ಹಾಕಲು ಹೊರಟಿದೆ ಎಂದು ಆರೋಪಿಸಿದರು.
ಓದಿ-ವಿಧಾನ ಪರಿಷತ್ನಲ್ಲಿ ಕುಳಿತು 'ಅಸಹ್ಯ' ವಿಡಿಯೋ ನೋಡಿದ್ರಾ MLC ಪ್ರಕಾಶ್ ರಾಥೋಡ್!?
ಅಲ್ಲದೆ ಖಾಸಗಿ ಕಂಪನಿಗಳಿಗೆ ತಮ್ಮ ನೆಟ್ವರ್ಕ್ ಅಡವಿಟ್ಟ ಪರಿಣಾಮ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಸರ್ಕಾರಿ ಕಚೇರಿಗಳಿಗೆ ಪ್ರತಿನಿತ್ಯ ರೈತರು, ಜನಸಾಮಾನ್ಯರು ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಈ ವೇಳೆ ಅಧಿಕಾರಿಗಳು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಲ್ಲಿ ಉಗ್ರ ಹೋರಾಟ ನಡೆಸುವುದಾಗಿ ರೈತರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.