ಕೋಲಾರ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ, ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಾವಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ಕೋಲಾರದಲ್ಲಿ ರೈತ ಆತ್ಮಹತ್ಯೆ - Farmer suicide
ರಾಜ್ಯದಲ್ಲಿ ರೈತರ ಆತ್ಮಹತ್ಯಾ ಸರಣಿ ಮುಂದುವರೆದಿದ್ದು, ಈಗ ಕೋಲಾರ ಜಿಲ್ಲೆಯಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
![ಸಾಲಬಾಧೆ ತಾಳಲಾರದೆ ಕೋಲಾರದಲ್ಲಿ ರೈತ ಆತ್ಮಹತ್ಯೆ](https://etvbharatimages.akamaized.net/etvbharat/prod-images/768-512-4264522-thumbnail-3x2-vis.jpg)
ರೈತ ಆತ್ಮಹತ್ಯೆ
ಮುಕುಂದಪ್ಪ (55) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಈತ ಹರಟಿ ಗ್ರಾಮೀಣ ಬ್ಯಾಂಕ್ನಲ್ಲಿ 5 ಲಕ್ಷ ರೂ. ಅಲ್ಲದೇ ಕೈ ಸಾಲವನ್ನೂ ಮಾಡಿಕೊಂಡಿದ್ದ. ಹೀಗೆ ಒಟ್ಟು 30 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ.
ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.