ಕರ್ನಾಟಕ

karnataka

By

Published : Jun 24, 2020, 5:38 PM IST

ETV Bharat / state

ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿದ್ರೆ, ಸರ್ಕಾರವೇ ಹೊಣೆ: ಕೋಡಿಹಳ್ಳಿ ಚಂದ್ರಶೇಖರ್

ಕೊರೊನಾ ಅಟ್ಟಹಾಸದ ನಡುವೆ ಹಠಕ್ಕೆ ಬಿದ್ದು ರಾಜ್ಯ ಸರ್ಕಾರ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿದ್ರೆ, ರಾಜ್ಯ ಸರ್ಕಾರವೇ ಹೊಣೆಯಾಗಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

Farmers Association  President kodihalli chandrashekhar statement
ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿದ್ರೆ, ಸರ್ಕಾರವೇ ಹೊಣೆಯಾಗಬೇಕು: ಕೋಡಿಹಳ್ಳಿ ಚಂದ್ರಶೇಖರ್

ಕೋಲಾರ:ದೇಶಾದ್ಯಂತ ಕೊರೊನಾ ಸೋಂಕಿತರು ಹೆಚ್ಚುತ್ತಿದ್ದಾರೆ. ಈ ನಡುವೆ ಸಿಎಂ ಯಡಿಯೂರಪ್ಪ ಅವರ ಸರ್ಕಾರ ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿದ್ರೆ, ರಾಜ್ಯ ಸರ್ಕಾರವೇ ಹೊಣೆ ಎಂದು ಒಪ್ಪಿಕೊಳ್ಳಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿದ್ರೆ, ಸರ್ಕಾರವೇ ಹೊಣೆ: ಕೋಡಿಹಳ್ಳಿ ಚಂದ್ರಶೇಖರ್

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ಅಟ್ಟಹಾಸದ ನಡುವೆ ಹಠಕ್ಕೆ ಬಿದ್ದು ಸರ್ಕಾರ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದ್ರೆ ರಾಜ್ಯ ಸರ್ಕಾರವೇ ಕಾರಣ ಅಂತ ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕೃಷಿಯಲ್ಲಿ ಕಾರ್ಪೊರೇಟ್ ಕಂಪನಿಗಳನ್ನ ತರಲು ಕೇಂದ್ರ ಸರ್ಕಾರ ಸಂಚು ಮಾಡುತ್ತಿದ್ದು, ಬಿತ್ತನೆ ಬೀಜವನ್ನ ಕಾರ್ಪೊರೇಟ್ ಕಂಪನಿಗಳಿಗೆ ವಹಿಸಿದೆ ಎಂದು ಆರೋಪಿಸಿದರು. ಭೂ ಸುಧಾರಣಾ ಕಾಯ್ದೆ ತಂದು ರೈತರನ್ನು ಕೃಷಿಯಿಂದ ವಿಮುಕ್ತಿಗೊಳಿಸಲು ಸರ್ಕಾರ ಹುನ್ನಾರ ನಡೆಸಿದೆ. ಅಲ್ಲದೇ, ಕೇಂದ್ರ ಸರ್ಕಾರವು ದೇಶವನ್ನು ವಿದೇಶಿಯರಿಗೆ ಒಪ್ಪಿಸಲು ಮುಂದಾಗಿದೆ. ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ, ಈಗ ರೈತರನ್ನೇ ಮಾರಾಟ ಮಾಡಲು ಹೊರಟಿದ್ದಾರೆ ಎಂದು ಕೋಡಿಹಳ್ಳಿ ಗುಡುಗಿದ್ರು.

ABOUT THE AUTHOR

...view details