ಕೋಲಾರ: ರೈತರ ಕೃಷಿ ಪಂಪ್ಸೆಟ್ಗಳಿಗೆ, ಯುಎನ್ಪಿಐಪಿ ಯೋಜನೆಯಡಿ ವಿದ್ಯುತ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಕೋಲಾರದಲ್ಲಿ ಪ್ರತಿಭಟನೆ ನಡೆಯಿತು.
ಕೋಲಾರ ನಗರದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಯುಎನ್ಪಿಐಪಿ ಯೋಜನೆಯಡಿ, ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ, ಜಿಲ್ಲಾದ್ಯಂತ ಸುಮಾರು 800 ಕ್ಕೂ ಅಧಿಕ ರೈತರು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಪ್ರತಿಯೊಬ್ಬರು 26 ಸಾವಿರ ರೂಪಾಯಿಗಳನ್ನ ಪಾವತಿಸಿದ್ದಾರೆ. ಎರಡು ವರ್ಷಗಳು ಕಳೆದರೂ ಸಹ ಕಾಮಗಾರಿ ನಡೆಸದೆ ರೈತರನ್ನ ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆಂದು ಆರೋಪಿಸಿದರು.