ಕೋಲಾರ : ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕೊಲೆಗೈದ ಪ್ರಕರಣ ಕೋಲಾರ ಜಿಲ್ಲೆಯ ತೊಟ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ರಮ್ಯಾ (19) ಕೊಲೆಯಾದ ಯುವತಿ. ತಂದೆ ವೆಂಕಟೇಶಗೌಡ ಕೊಲೆ ಆರೋಪಿ. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಪ್ರಕರಣದ ಹಿನ್ನೆಲೆ: ಅನ್ಯಜಾತಿಯ ಯುವಕನನ್ನು ಮಗಳು ಪ್ರೀತಿಸುತ್ತಿರುವ ಮಾಹಿತಿ ಸಿಕ್ಕ ಕೂಡಲೇ ಕುಟುಂಬಸ್ಥರು ಬುದ್ಧಿ ಹೇಳಿದ್ದಾರೆ. ಆದರೆ ರಮ್ಯಾ ಹೆತ್ತವರ ಮತು ಕೇಳಿರಲಿಲ್ಲ. ಇದರಿಂದ ಕೋಪಗೊಂಡ ತಂದೆ ಆಗಸ್ಟ್ 25ರಂದು ಮಗಳನ್ನು ಹತ್ಯೆ ಮಾಡಿದ್ದಾನೆ. ಯಾರಿಗೂ ತಿಳಿಯದಂತೆ ಕುಟುಂಬಸ್ಥರು ಅಂತ್ಯಸಂಸ್ಕಾರ ಮುಗಿಸಿದ್ದರು. ಈ ಕುರಿತು ಊರಿನಲ್ಲಿ ಗುಸುಗುಸು ಮಾತು ಶುರುವಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ವೆಂಕಟೇಶಗೌಡನನ್ನು ಕರೆದು ವಿಚಾರಿಸಿದಾಗ ಪ್ರಕರಣ ಬಯಲಿಗೆ ಬಂದಿದೆ.
ತಹಶೀಲ್ದಾರ್ ಹರ್ಷವರ್ಧನ್ ಸಮ್ಮುಖದಲ್ಲಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳಾದ ವೆಂಕಟೇಶಗೌಡ, ಮೋಹನ್, ಚೌಡೇಗೌಡ ಎಂಬವರನ್ನು ಬಂಧಿಸಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಮರ್ಯಾದಾ ಹತ್ಯೆ : ಅಕ್ಕನ ಕತ್ತು ಹಿಸುಕಿ, ಆಕೆಯ ಪ್ರಿಯಕರನಿಗೆ ಗುಂಡಿಕ್ಕಿದ ಅಪ್ರಾಪ್ತ ತಮ್ಮ
ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವತಿ ಹತ್ಯೆ: ಯುವಕನೊಂದಿಗೆ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಯುವತಿಯನ್ನು ಕುಟುಂಬಸ್ಥರೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯ ಸರಾಯ್ ಅಕಿಲ್ ಪ್ರದೇಶದಲ್ಲಿ ನಡೆದಿದೆ.