ಕೋಲಾರ: ಗುಜರಿ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಕೆಜಿಎಫ್ ನಗರದ ಎಂ.ಪಿ. ಮಹಲ್ ಬಳಿ ನಡೆದಿದೆ.
ಗುಜರಿ ಗೋದಾಮಿನಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ - ಕೋಲಾರದ ಗುಜರಿ ಗೋಡನ್ಗೆ ಅಗ್ನಿ ಅವಘಡ
ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ಗುಜರಿ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಕೆಜಿಎಫ್ನ ವೆಂಕಟಾಚಲಪತಿ ಎಂಬುವವರಿಗೆ ಸೇರಿದ ಗುಜರಿ ಗೋದಾಮು ಇದಾಗಿದ್ದು, ಗೋದಾಮಿನ ಬಳಿ ನಿಲ್ಲಿಸಲಾಗಿದ್ದ ಅಪ್ಪೆ ಆಟೋ, ಒಂದು ಕಾರು ಸೇರಿದಂತೆ ಗುಜರಿ ವಸ್ತುಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಇದರ ಪಕ್ಕದಲ್ಲಿದ್ದ ಬ್ಯೂಟಿ ಪಾರ್ಲರ್ಗೂ ಬೆಂಕಿ ತಗುಲಿ ಸಾಕಷ್ಟು ವಸ್ತುಗಳಿಗೆ ಹಾನಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಭಾರಿ ಅನಾಹುತ ತಪ್ಪಿದೆ. ಇನ್ನು ನಗರದ ಮಧ್ಯದಲ್ಲಿ ಗುಜರಿ ಗೋಡೌನ್ ತೆರೆಯಲು ಅವಕಾಶ ನೀಡಿದ ನಗರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.