ಕೋಲಾರ:ಈದ್ ಮಿಲಾದ್ ಹಬ್ಬದ ಮೆರವಣಿಗೆ ತೆರಳುತ್ತಿದ್ದ ವೇಳೆ ಒಂದು ಬಾಕ್ಸ್ ಪಟಾಕಿ ಸಿಡಿದ ಪರಿಣಾಮ ಐದು ಮಂದಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಗರದಲ್ಲಿ ನಡೆದಿದೆ.
ಕೋಲಾರ: ಈದ್ ಮಿಲಾದ್ ಮೆರವಣಿಗೆಯಲ್ಲಿ ಪಟಾಕಿ ಸಿಡಿದು ಐವರಿಗೆ ಗಾಯ - kolar Eid Milad parade news
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೆರವಣಿಗೆ ತೆರಳುತ್ತಿದ್ದ ವೇಳೆ ಒಂದು ಬಾಕ್ಸ್ ಪಟಾಕಿ ಸಿಡಿದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಈದ್ ಮಿಲಾದ್ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಮೆರವಣಿಗೆ ಹೋಗುವ ಸಂದರ್ಭದಲ್ಲಿ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಯುವಕನೋರ್ವ ಒಂದು ಪಟಾಕಿ ಸಿಡಿಸಿದ್ದ. ಆಗ ಮೆರವಣಿಗೆ ವಾಹನದಲ್ಲಿದ್ದ ಒಂದು ಬಾಕ್ಸ್ ಪಟಾಕಿ ಒಟ್ಟಿಗೆ ಸಿಡಿದ ಪರಿಣಾಮ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಮೆರವಣಿಗೆಯಲ್ಲಿದ್ದ ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಉಳಿದ 20ಕ್ಕೂ ಹೆಚ್ಚು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಗಾಯಾಳುಗಳನ್ನ ಕೋಲಾರದ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಗೆ ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.