ಕೋಲಾರ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕು ಯರನಾಗನಹಳ್ಳಿ ಬಳಿ ನಡೆದಿದೆ.
ಅತ್ಯಾಚಾರ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ.. ತಪ್ಪಿಸಿಕೊಳ್ಳೋಕೆ ಬಿಡಲೇ ಇಲ್ಲ.. - Rabartson police station
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲು ತೆರಳಿದ್ದಾಗ ಆರೋಪಿ ಕಲ್ಲುಗಳಿಂದ ಹಲ್ಲೆ ಮಾಡಿದ್ದರಿಂದ ಪೊಲೀಸರೂ ಸಹ ಆತನ ಗುಂಡಿನ ದಾಳಿ ನಡೆಸಿರೋ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ಬಳಿ ನಡೆದಿದೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ತಮಿಳ್ ಅರಸನ್ ಅಲಿಯಾಸ್ ಕುಟ್ಟಿಯನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ರಾಬರ್ಟ್‌ಸನ್ ಪೇಟೆ ಸಿಪಿಐ ಸೂರ್ಯಪ್ರಕಾಶ್ ಆರೋಪಿಯ ಕಾಲು ಹಾಗೂ ಕೈಗೆ ಎರಡು ಸುತ್ತು ಗುಂಡು ಹಾರಿಸಿ ಬಂಧಿಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಪೇದೆ ಮುನಿಸ್ವಾಮಿ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ರಾಬರ್ಟ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.