ಕೋಲಾರ: ಆಶಾ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ನಗರದಲ್ಲಿ ಸಂಸದ ಎಸ್.ಮುನಿಸ್ವಾಮಿ ಅವರು ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿದರು.
ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿಯವರಿಂದ ಆಹಾರ ಪದಾರ್ಥಗಳ ಕಿಟ್ ವಿತರಣೆ... - ಕೋಲಾರದಲ್ಲಿ ಆಹಾರ ಪದಾರ್ಥಗಳ ಕಿಟ್ ವಿತರಣೆ
ಬಂಗಾರಪೇಟೆ ಪಟ್ಟಣದಲ್ಲಿ ಸಂಸದ ಎಸ್.ಮುನಿಸ್ವಾಮಿ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಸಿಬ್ಬಂದಿ, ಪೌರ ಕಾರ್ಮಿಕರು ಸೇರಿದಂತೆ ದೇವಾಲಯದ ಅರ್ಚಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿದರು.
ಬಂಗಾರಪೇಟೆ ಪಟ್ಟಣದಲ್ಲಿ ಅವರು ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಸಿಬ್ಬಂದಿ, ಪೌರ ಕಾರ್ಮಿಕರು ಸೇರಿದಂತೆ ದೇವಾಲಯದ ಅರ್ಚಕರಿಗೆ ಕಿಟ್ ವಿತರಣೆ ಮಾಡಿದರು. ಇನ್ನು ಕೊರೊನಾ ಸೋಂಕು ತಡೆಗಟ್ಟುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಶ್ರಮ ವಹಿಸುತ್ತಿದ್ದು, ಅವರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದರು. ಅಲ್ಲದೆ ರಾಜ್ಯದಲ್ಲಿ ಪೌರಕಾರ್ಮಿಕರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿದ ಸಂಸದರು ಹಲ್ಲೆ ಕೋರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಕೋಲಾರ ಜಿಲ್ಲೆಯನ್ನು ಸ್ವಚ್ಚವಾಗಿರಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಹೆಚ್ಚಾಗಿದ್ದು, ಸಮಾಜದಲ್ಲಿ ಪೌರ ಕಾರ್ಮಿಕರನ್ನು ಗೌರವಯುತವಾಗಿ ನೋಡಬೇಕೆಂದು ತಿಳಿಸಿದರು. ಇನ್ನು ಇದೇ ವೇಳೆ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಜಿಲ್ಲಾ ಪಂಚಾಯತ್ ಸದಸ್ಯ ಬಿ.ವಿ.ಮಹೇಶ್ ಸಂಸದರಿಗೆ ಸಾಥ್ ನೀಡಿದರು.