ಕರ್ನಾಟಕ

karnataka

ETV Bharat / state

ಮಾಜಿ ಸ್ಪೀಕರ್ ರಮೇಶ್ ಕುಮಾರ್​ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ - ಮಾಜಿ ಸಿಎಂ ಕುಮಾರಸ್ವಾಮಿ ಕಾರಿನ ಮುಂದೆ ಪ್ರತಿಭಟನೆ

ಮಾಜಿ ಸ್ಪೀಕರ್ ರಮೇಶ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.

Former CM Kumaraswamy Clarification  unspoken words against Ramesh kumar  Former CM Kumaraswamy  ಮಾಜಿ ಸ್ಪೀಕರ್ ರಮೇಶ್ ವಿರುದ್ಧ ಅವಾಚ್ಯ ಪದಗಳ ಬಳಕೆ  ಮಾಜಿ ಸಿಎಂ ಕುಮಾರಸ್ವಾಮಿ  ಮಾಸ್ತೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಶಿಥಿಲ  ಮಾಜಿ ಸಿಎಂ ಕುಮಾರಸ್ವಾಮಿ ಕಾರಿನ ಮುಂದೆ ಪ್ರತಿಭಟನೆ  ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ
ಮಾಜಿ ಸ್ಪೀಕರ್ ರಮೇಶ್ ವಿರುದ್ಧ ಅವಾಚ್ಯ ಪದಗಳ ಬಳಕೆ ಆರೋಪ

By

Published : Nov 23, 2022, 1:42 PM IST

ಕೋಲಾರ: ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಇದರಿಂದ ಅವರಿಗೆ ನೋವಾಗಿದ್ರೆ ವಿಷಾದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹೆಚ್​ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಶ್ರೀನಿವಾಸಪುರ ವಿಧಾನಸಬಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಮಾಸ್ತೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಶಿಥಿಲಗೊಂಡಿದ್ದು, ಶಾಲಾ ಮಕ್ಕಳು ಮಾಜಿ ಸಿಎಂ ಕುಮಾರಸ್ವಾಮಿ ಕಾರಿನ ಮುಂದೆ ಪ್ರತಿಭಟನೆ ನಡೆಸಿದರು. ಶಾಲಾ ಮಕ್ಕಳ ಪ್ರತಿಭಟನೆಗೆ ಮಣಿದ ಕುಮಾರಸ್ವಾಮಿ ಶಿಥಿಲವಾದ ಸರ್ಕಾರಿ ಶಾಲೆ ವೀಕ್ಷಣೆಗೆ ತೆರಳಲು ಮುಂದಾದರು. ಈ ವೇಳೆ ಮಾಜಿ ಸ್ಪೀಕರ್​ ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಅವಾಚ್ಯ ಪದಗಳ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಈ ಸಂಬಂಧದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನೆಲ್ಲೇ ಹೆಚ್​ಡಿಕೆ ಸ್ಪಷ್ಟೀಕರಣ ನೀಡಿದ್ದಾರೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಅಂತಾ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಓದಿ:ವಯಸ್ಸು 45 ದಾಟುತ್ತಿದೆ ಸಾರ್​.. ಮದುವೆಗೆ ಕನ್ಯೆ ಸಿಗುತ್ತಿಲ್ಲವೆಂದು ಹೆಚ್​ಡಿಕೆಗೆ ಮನವಿ ಪತ್ರ ಸಲ್ಲಿಸಿದ ರೈತ

ABOUT THE AUTHOR

...view details