ಕೋಲಾರ: ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ಅಧಿಕಾರಿಗಳ ಮೇಲೆ ಜಿಲ್ಲಾ ಪಂಚಾಯಿತಿ ಸದಸ್ಯರು ಗರಂ ಆಗಿದ್ದಾರೆ.
ಕೋಲಾರ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲಾಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ನೇತೃತ್ವದಲ್ಲಿ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಂಗಾರಪೇಟೆ, ಮಾಲೂರು ಗಡಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸಂಬಂಧ ಪಟ್ಟ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದರಿಂದ ರೈತರು ಆಂತಕಗೊಂಡಿದ್ದಾರೆ ಎಂದು ಸಭೆಯಲ್ಲಿ ಸೂಕ್ತ ಕ್ರಮ ಕ್ರಮಕ್ಕೆ ಒತ್ತಾಯಿಸಿದರು.
ಇಲ್ಲಿನ ಬೇತಮಂಗಳ ಸಮೀಪ ಕೆಲವರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಮಹಿಳೆಯರು, ಮಕ್ಕಳಿಗೆ ತೊಂದರೆಯಾಗುತ್ತಿದೆ. ಪೊಲೀಸರ ಗಮನಕ್ಕೆ ತಂದರು ಕ್ರಮಕೈಗೊಳ್ಳುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು.
ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಭರವಸೆ ನೀಡಿದರು. ಸಭೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಶ್ರೀನಿವಾಸ್‌ಗೌಡ ಇದ್ದರು.