ಕೋಲಾರ: ಕಾಂಗ್ರೆಸ್ನವ್ರು ಮಾತಿನ ಮೋಡಿ ಮಾಡಿ ದಾರಿ ತಪ್ಪಿಸುತ್ತಿದ್ದಾರೆ. ನಮ್ಮನ್ನು ಬಿಜೆಪಿಯ ಬಿ ಟೀಂ ಅಂತಾ ಹೇಳುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಯಾರು ಯಾರನ್ನು ಗೆಲ್ಲಿಸಿದ್ರು ಅಂತಾ ತಿಳಿದಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಕಿದರು.
ಕೋಲಾರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಇಲ್ಲ. ಆರು ಕಡೆಗಳಲ್ಲಿ ಅಭ್ಯರ್ಥಿಗಳು ನಿಂತಿದ್ದಾರೆ. ನಾವು 19 ಕಡೆಗಳಲ್ಲಿ ಅಭ್ಯರ್ಥಿಗಳನ್ನು ಹಾಕಿಲ್ಲ. ಹಾಗಂತಾ, ನಾವು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದರು.
ಯಡಿಯೂರಪ್ಪ ನಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್ನವರು ನಮ್ಮ ಬೆಂಬಲ ಕೋರಿಲ್ಲ. ನೀವು ಬಿಜೆಪಿಗೆ ಬೆಂಬಲ ಕೊಡಿ ಎಂದು ಪರೋಕ್ಷವಾಗಿ ನಮಗೆ ತಿಳಿಸುತ್ತಿದ್ದಾರೆ. ಕಾಂಗ್ರೆಸ್ನವರು ನಮನ್ನು ಮುಗಿಸಬೇಕು ಎಂದು ತೀರ್ಮಾನ ಮಾಡಿದ್ದಾರೆ.