ಕೊಲಾರ:ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ವೇಳೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಾಲೂರು ಶಾಸಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ವಿಚಾರ: ಸಚಿವ-ಶಾಸಕನ ಮಧ್ಯೆ ಮಾತಿನ ಚಕಮಕಿ - ಸಚಿವರಿಂದ ಕಾರ್ಯಕ್ರಮಕ್ಕೆ ಚಾಲನೆ
ಲಕ್ಕೂರು ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾಲೂರು ಶಾಸಕ ಕೆ.ವೈ.ನಂಜೇಗೌಡ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗ್ರಾಮ ಪಂಚಾಯಿತಿ ಇದಾಗಿದೆ. ಆದರೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ನೂತನ ಕಟ್ಟಡವನ್ನು ಶಾಸಕರು ಬರುವ ಮುನ್ನವೇ ಉದ್ಘಾಟನೆ ಮಾಡಿದರು.
ಲಕ್ಕೂರು ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಲೂರು ಶಾಸಕ ಕೆ.ವೈ.ನಂಜೇಗೌಡ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗ್ರಾಮ ಪಂಚಾಯಿತಿ ಇದಾಗಿದೆ. ಆದರೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ನೂತನ ಕಟ್ಟಡವನ್ನು ಶಾಸಕರು ಬರುವ ಮುನ್ನವೇ ಉದ್ಘಾಟನೆ ಮಾಡಿದರು. ಈ ಹಿನ್ನೆಲೆ ತಡವಾಗಿ ಬಂದ ಮಾಲೂರು ಶಾಸಕ ಕೆ.ವೈ.ನಂಜೇಗೌಡ, ತಾವು ಬರುವುದಕ್ಕೂ ಮುನ್ನವೇ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವರು ಹಾಗೂ ಶಾಸಕರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಇದೇನು ನಿಮ್ಮ ಪಾರ್ಟಿ ಕಾರ್ಯಕ್ರಮ ಅಲ್ಲ. ನೀವು ಮಾಹಿತಿ ನೀಡದೆ ಬಂದಿದ್ದೀರಾ ಎಂದು ಶಾಸಕ ನಂಜೇಗೌಡ ಸಚಿವರನ್ನು ಪ್ರಶ್ನೆ ಮಾಡಿದರು. ಇನ್ನು ಸಚಿವರು ಬಿಜೆಪಿ ಮುಖಂಡರನ್ನು ಇರಿಸಿಕೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಶಾಸಕ ಕೆ.ವೈ.ನಂಜೇಗೌಡ ಆಕ್ರೋಶ ವ್ಯಕ್ತಪಡಿಸಿದರು.