ಕೋಲಾರ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಕೆರೆ-ಕಟ್ಟೆ, ರಾಜಕಾಲುವೆಗಳು ತುಂಬಿ ಹರಿಯುತ್ತಿವೆ. ರಸ್ತೆಯಲ್ಲಿ ನೀರು ಹರಿಯುತ್ತಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿದ್ದ ಕೆಲವು ಮನೆಗಳು ಜಲಾವೃತವಾಗಿದ್ದು, ಹಲವೆಡೆ ಬೆಳೆ ನಾಶವಾಗಿರುವ ಮಾಹಿತಿ ದೊರೆತಿದೆ.
ಕೋಲಾರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು, ಬೆಳೆಯೂ ನಾಶ - ಈಟಿವಿ ಭಾರತ್ ಕನ್ನಡ
ಕೆಲವು ದಿನಗಳಿಂದ ರಾಜ್ಯದ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಕೆಲವೆಡೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಕೋಲಾರದಲ್ಲಿ ಸುರಿದ ಭಾರಿ ಮಳೆಗೆ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ.
ಧಾರಾಕಾರ ಮಳೆಗೆ ಕೋಲಾರದ ಜನತೆ ತತ್ತರ
ಬಂಗಾರಪೇಟೆ ತಾಲ್ಲೂಕು ಹನುಮಂತರಾಯನದಿನ್ನೆ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಗ್ರಾಮದ ಮುನಿಲಕ್ಷ್ಮಮ್ಮ ಎಂಬುವರಿಗೆ ಸೇರಿದ ಮನೆ ಇದಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ನರಸಾಪುರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆ ನೀರು ಜಮೀನುಗಳಿಗೆ ನುಗ್ಗಿದ್ದು, ನೂರಾರು ಎಕರೆ ಕ್ಯಾಪ್ಸಿಕಂ, ಬೀನ್ಸ್ ಬೆಳೆ ಹಾನಿಯಾಗಿದೆ.
ಇದನ್ನೂ ಓದಿ :ಮಂಡ್ಯದಲ್ಲಿ ಧಾರಾಕಾರ ಮಳೆಗೆ ಗ್ರಾಮಗಳು ಜಲಾವೃತ.. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್