ಕರ್ನಾಟಕ

karnataka

ETV Bharat / state

ಕೋಲಾರ: ಭಾರೀ ಮಳೆಗೆ ‌ಮನೆ ಗೋಡೆ ಕುಸಿದು ಬಾಲಕ ಸಾವು - Koala

ಕಳೆದ 15 ದಿನಗಳಿಂದ ಮಳೆ ಸುರಿಯುತ್ತಿದ್ದು, ಪಾತಮುತ್ತಕಪಲ್ಲಿ ಗ್ರಾಮದ ಹಳೇ ಮನೆಯ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದಾನೆ.

Koala
ಭಾರೀ ಮಳೆಗೆ ‌ಮನೆ ಗೋಡೆ ಕುಸಿತ: ಬಾಲಕ ಸಾವು

By

Published : Oct 24, 2020, 9:31 AM IST

ಕೋಲಾರ: ಭಾರೀ ಮಳೆಯಿಂದ ‌ಮನೆಯ ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಹರೀಶ್ (13) ಮೃತ ಬಾಲಕ. ಕಳೆದ 15 ದಿನಗಳಿಂದ ಮಳೆ ಸುರಿಯುತ್ತಿದ್ದು, ಪಾತಮುತ್ತಕಪಲ್ಲಿ ಗ್ರಾಮದ ಹಳೇ ಮನೆಯ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ತಾಯಿ ಆನಂದಮ್ಮ ಹಾಗೂ ಮತ್ತೊಬ್ಬ ಪುತ್ರ ಮಣಿಕಂಠ ಇದ್ರು. ಈ ವೇಳೆ ಹರೀಶ್ ಮೃತಪಟ್ಟರೆ, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಶ್ರೀನಿವಾಸಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ಜ್ವರದಿಂದ ಹರೀಶ್ ತಂದೆ ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಮತ್ತೊಂದು ದುರ್ಘಟನೆ ನಡೆದಿರುವುದು ಕುಟುಂಬಕ್ಕೆ ದೊಡ್ಡ ಆಘಾತ ತಂದೊಡ್ಡಿದೆ.

ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details