ಕರ್ನಾಟಕ

karnataka

ETV Bharat / state

ಕೋಲಾರದಲ್ಲಿ ಬಂದ್​ ಇಲ್ಲ...  ಮಾಲೂರಿನಲ್ಲಿ ವೈದ್ಯರಿಂದ ಪ್ರತಿಭಟನೆಯಷ್ಟೇ! - ಕೋಲಾರ

ಐಎಂಎ ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್​​​ಗೆ ಕೋಲಾರದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಲಿಲ್ಲ. ಆದ್ರೆ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಮಾತ್ರ 10 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆ ವೈದ್ಯರು ಎನ್ಎಂಸಿ ಮಸೂದೆ ಖಂಡಿಸಿ ಪ್ರತಿಭಟನೆ ಮಾಡಿದರು.

ಹಾಸ್ಪಿಟಲ್ ನೋ ಬಂದ್

By

Published : Jul 31, 2019, 2:05 PM IST

ಕೋಲಾರ:ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ಎಂಸಿ) ಮಸೂದೆ ವಿರುದ್ದ ಭಾರತೀಯ ವೈದ್ಯಕೀಯ ಸಂಘ ನೀಡಿರುವ ದೇಶ ವ್ಯಾಪಿ ಬಂದ್​ಗೆ ಕೋಲಾರದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

ಎಂದಿನಂತೆ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್​ಗಳು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಬೆಂಬಲ ಕೋಲಾರದಿಂದ ವ್ಯಕ್ತವಾಗಲಿಲ್ಲ. ಆದ್ರೆ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಮಾತ್ರ 10 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆ ವೈದ್ಯರು ಎನ್ಎಂಸಿ ಮಸೂದೆಯನ್ನ ಖಂಡಿಸಿ ಪ್ರತಿಭಟನೆ ಮಾಡಿದರು.

ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಬಂದ್​ಗೆ ಕೋಲಾರದಲ್ಲಿ ವೈದ್ಯರು ಬೆಂಬಲ ನೀಡಲಿಲ್ಲ

ಮೊದಲಿನಿಂದಲೂ ಮಸೂದೆ ವಿರೋಧಿಸುತ್ತ ಬಂದಿದ್ದ ಭಾರತೀಯ ವೈದ್ಯಕೀಯ ಸಂಘ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್​ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದೆ. ಆದರೆ ಕೋಲಾರದಲ್ಲಿ ಯಾವುದೆ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಬಂದ್ ಆಗದೇ ವೈದ್ಯರು ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ ನೀಡಿದರು. ಆದ್ರೆ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರಿ ಆಸ್ಪತ್ರೆ ವೈದ್ಯರು ಕೂಡಾ ಸಿದ್ದವಾಗಿದ್ದು, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ.

ABOUT THE AUTHOR

...view details