ಕೋಲಾರ :ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾಗಿರುವ ಘಟನೆ ತಾಲೂಕು ಕಮ್ಮಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಮದುವೆಯಾದ ಆರು ತಿಂಗಳಿಗೇ ಕೌಟುಂಬಿಕ ಕಲಹ: ಪತ್ನಿ ಕೊಂದು ನೇಣಿಗೆ ಶರಣಾದ ಪತಿ - ಕೌಟುಂಬಿಕ ಕಲಹ
ದಂಪತಿಗಳ ನಡುವೆ ಜಗಳ ನಡೆದು ಪತಿ ,ಪತ್ನಿಯನ್ನು ಕೊಂದು ಆತನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕು ಕಮ್ಮಸಂದ್ರ ಗ್ರಾಮದಲ್ಲಿ ಜರುಗಿದೆ.
![ಮದುವೆಯಾದ ಆರು ತಿಂಗಳಿಗೇ ಕೌಟುಂಬಿಕ ಕಲಹ: ಪತ್ನಿ ಕೊಂದು ನೇಣಿಗೆ ಶರಣಾದ ಪತಿ ಪತ್ನಿ ಕೊಂದು ನೇಣಿಗೆ ಶರಣಾದ ಪತಿ](https://etvbharatimages.akamaized.net/etvbharat/prod-images/768-512-5685528-thumbnail-3x2-mgnd.jpg)
husband and wife died in kolar
ಮೋಹನ್ ಹಾಗೂ ಪದ್ಮ ಮೃತ ದಂಪತಿ. ಕಳೆದ ಆರು ತಿಂಗಳ ಹಿಂದಷ್ಟೇ ಇವರು ಮದುವೆಯಾಗಿದ್ದರು. ಆದರೆ ನಿನ್ನೆ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು, ಕೋಪದಲ್ಲಿ ಮೋಹನ್ ಪತ್ನಿ ಪದ್ಮಾಗೆ ಹೊಡೆದಿದ್ದಾನೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಪದ್ಮಾ ಅಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಗಾಬರಿಗೊಂಡ ಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.