ಕರ್ನಾಟಕ

karnataka

ETV Bharat / state

ಮಾಲೂರು ತಾಲೂಕಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ: ಅಧಿಕಾರಿಗಳ ಜಾಣ ಕುರುಡು

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಾದ್ಯಂತ ಎಗ್ಗಿಲ್ಲದೆ ಅಕ್ರಮ ಮಣ್ಣು ಸಾಗಾಟ ನಡೆಯುತ್ತಿದ್ದು, ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

illegal soil trafficking
ಮಾಲೂರು ತಾಲ್ಲೂಕಿನಾದ್ಯಂತ ಅಕ್ರಮ ಮಣ್ಣು ಸಾಗಾಟ ಆರೋಪ

By

Published : Jan 5, 2021, 6:39 PM IST

ಕೋಲಾರ: ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಕೋಲಾರ ಜಿಲ್ಲೆಯ ಕೆಂಪು ಹಾಗೂ ಜೇಡಿ ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಮಾಲೂರು ತಾಲ್ಲೂಕಿನಾದ್ಯಂತ ಅಕ್ರಮ ಮಣ್ಣು ಸಾಗಾಟ ಆರೋಪ

ಮಾಲೂರು ತಾಲೂಕಿನ ಮೈಲಾಂಡಹಳ್ಳಿ ಕೆರೆಯಲ್ಲಿ ಬೆಳಗ್ಗೆಯಿಂದಲೇ ಟಿಪ್ಪರ್, ಲಾರಿಗಳಲ್ಲಿ ಮಣ್ಣು ಸಾಗಾಟ ಎಗ್ಗಿಲ್ಲದೆ ನಡೆಯುತ್ತದೆ. ಮಣ್ಣು ಮಾಫಿಯಾದಲ್ಲಿ ತೊಡಗಿರುವವರು ಕೆಲ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ದಂಧೆಕೋರರು ನೆರೆಯ ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶಕ್ಕೆ ಕಳುಹಿಸಿಕೊಡುತ್ತಿದ್ದಾರೆ. ಆದರೆ ತಾಲೂಕಿನ ಅಧಿಕಾರಿಗಳು ಮಾತ್ರ ಜಾಣ ಕುರುಡತನ ಪ್ರದರ್ಶಿಸಿ, ಅಕ್ರಮ ಮಣ್ಣು ಸಾಗಾಣೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕೆಲವರ ಆರೋಪವಾಗಿದೆ.

ABOUT THE AUTHOR

...view details