ಕೋಲಾರ:ಇನೋವಾ ಕಾರಿನಲ್ಲಿ ಅಕ್ರಮವಾಗಿ ರಕ್ತ ಚಂದನದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಬೇತಮಂಗಲ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಇನ್ನಿಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.
ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದ ಬಳಿ ತಮಿಳುನಾಡಿನಿಂದ ಬೆಂಗಳೂರಿಗೆ ಅಕ್ರಮವಾಗಿ ರಕ್ತ ಚಂದನ ತುಂಡುಗಳನ್ನು ಮೂವರು ಕಾರಿನಲ್ಲಿ ಸಾಗಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಬೇತಮಂಗಲ ಪೊಲೀಸರು, ಓರ್ವನನ್ನ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ.