ಕೋಲಾರ:ಕಾರ್ಮಿಕರ ಗಲಭೆಯಿಂದಾಗಿ ಸ್ಥಗಿತಗೊಂಡಿದ್ದ ವಿಸ್ಟ್ರಾನ್ ಕಂಪನಿ ಪುನರಾರಂಭಕ್ಕೆ ಕೆಲಸ ಶುರುವಾಗಿದ್ದು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿ ಕಳೆದ ಡಿಸೆಂಬರ್ನಲ್ಲಿ ವೇತನ ಸರಿಯಾಗಿ ನೀಡದ ಕಾರಣ ಕಾರ್ಮಿಕರು ಕಂಪನಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು. ಇದಾದ ನಂತರ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿತ್ತು. ಜೊತೆಗೆ ಕಂಪನಿಯ ಕೆಲ ಅಧಿಕಾರಿಗಳನ್ನೂ ಕೆಲಸದಿಂದ ತೆಗೆದುಹಾಕಲಾಗಿತ್ತು.