ಕರ್ನಾಟಕ

karnataka

ETV Bharat / state

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ₹70 ಸಾವಿರ ಕಟ್ಟಿರುವೆ.. ರೋಗಿಯ ಸಂಬಂಧಿ ಆರೋಪ - ಕೋಲಾರದಲ್ಲಿ ಕೊರೊನಾ ಪ್ರಕರಣ

ಶ್ರೀನಿವಾಸಪುರ ತಾಲೂಕಿನ 55 ವರ್ಷದ ಪಿ-6409 ರೋಗಿಯ ಬಳಿ ₹70 ಸಾವಿರ ಹಣ ಕಟ್ಟಿಸಿಕೊಳ್ಳುವ ಮೂಲಕ ಜಾಲಪ್ಪ ಖಾಸಗಿ ಆಸ್ಪತ್ರೆ ಹಗಲು ದರೋಡೆ ಮಾಡಿರುವ ಆರೋಪ ಕೇಳಿ ಬಂದಿದೆ..

dssd
ಕೊರೊನಾ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ 70 ಸಾವಿರ ಕಟ್ಟಿದ್ದೇನೆ

By

Published : Jun 26, 2020, 7:34 PM IST

ಕೋಲಾರ :ಕೊರೊನಾ ಮಹಾಮಾರಿಗೆ ಇಡೀ ವಿಶ್ವವೇ ನಲುಗಿದೆ. ಈ ಮಧ್ಯೆ ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಸುಲಿಗೆ ಮಾಡಲು ಮುಂದಾಗಿವೆ ಎಂಬ ಆರೋಪ ಕೇಳಿ ಬಂದಿದೆ.

ಕೊರೊನಾ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ₹70 ಸಾವಿರ ಕಟ್ಟಿದ್ದೇನೆ..

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ 55 ವರ್ಷದ ಪಿ-6409 ರೋಗಿಯ ಬಳಿ ₹70 ಸಾವಿರ ಹಣ ಕಟ್ಟಿಸಿಕೊಳ್ಳುವ ಮೂಲಕ ಜಾಲಪ್ಪ ಖಾಸಗಿ ಆಸ್ಪತ್ರೆ ಹಗಲು ದರೋಡೆ ಮಾಡಿರುವ ಆರೋಪ ಕೇಳಿ ಬಂದಿದೆ. ಸರ್ಕಾರ, ಅಧಿಕಾರಿಗಳು ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19ಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದಿತ್ತು. ಜೊತೆಗೆ ಹೆಲ್ತ್‌ಕಾರ್ಡ್, ಬಿಪಿಎಲ್ ಕಾರ್ಡ್, ಆಯುಷ್ಮಾನ್ ಭಾರತ್ ಸೇರಿ ಆರೋಗ್ಯ ವಿಮೆ ಕಾರ್ಡ್​ ಹೊಂದಿದವರಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಬೇಕು ಎಂಬ ಆದೇಶ ಇದೆ.

ಆದರೆ, ಈ ಆಸ್ಪತ್ರೆಯಲ್ಲಿ ಮಾತ್ರ ಸರ್ಕಾರದ ಯಾವ ಆದೇಶಕ್ಕೂ ಕಿಮ್ಮತ್ತಿಲ್ಲ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ನಮಗೂ ಇದಕ್ಕೆ ಸಂಬಂಧವೇ ಇಲ್ಲ ಎಂಬಂತೆ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನೂ ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದ್ರೂ ಪ್ರಯೋಜನವಾಗದ ಹಿನ್ನೆಲೆ ₹70 ಸಾವಿರ ಹಣ ಕಟ್ಟಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದೇನೆ ಎಂದು ಕೊರೊನಾದಿಂದ ಗುಣಮುಖರಾದ ವ್ಯಕ್ತಿ ಗಂಭೀರವಾಗಿ ಆರೋಪಿಸಿದ್ದಾರೆ.

ABOUT THE AUTHOR

...view details